Site icon Suddi Belthangady

ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲವಾಗಿ ಮಾತನಾಡಿರುವ ವೀಡಿಯೋ ಪ್ರಸಾರ: ಪುನೀತ್ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ: ಆ.8 ಬೆಳ್ತಂಗಡಿ ಕಸಬಾ ಗ್ರಾಮದ ಜೆರೋಮ್ ಬರ್ಬೋಝಾ (37) ಅವರ ದೂರಿನ ಮೇರೆಗೆ, ಯೂಟ್ಯೂಬ್‌ನಲ್ಲಿ ಅಶ್ಲೀಲವಾಗಿ ಮಾತನಾಡಿರುವ ವೀಡಿಯೋವನ್ನು ಪ್ರಸಾರ ಮಾಡಿದ ಪ್ರಕರಣ ಬೆಳ್ತಂಗಡಿ ಠಾಣೆಯಲ್ಲಿ ದಾಖಲಾಗಿದೆ.

ದೂರಿನ ಪ್ರಕಾರ, ಆಗಸ್ಟ್ 7ರಂದು ಜೆರೋಮ್ ಅವರು ಫೇಸ್‌ಬುಕ್‌ನಲ್ಲಿ ಸಂದೇಶಗಳನ್ನು ಪರಿಶೀಲಿಸುತ್ತಿರುವ ವೇಳೆ, ಆರೋಪಿತ ಪುನೀತ್ ಕೆರೆಹಳ್ಳಿ ಅವರು ಯೂಟ್ಯೂಬ್‌ನಲ್ಲಿ ಅಶ್ಲೀಲ ವಿಷಯ ಒಳಗೊಂಡ ವೀಡಿಯೋವನ್ನು ಹಂಚಿರುವುದು ಗಮನಕ್ಕೆ ಬಂದಿದೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 80/2025, ಕಲಂ 296 BNS 2023 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Exit mobile version