ಬೆಳ್ತಂಗಡಿ: ಮಂಡಲ ಬಿಜೆಪಿ ಮಹಿಳಾ ಮೋರ್ಚಾದಿಂದ ರಾಷ್ಟ್ರೀಯ ಕೈ ಮಗ್ಗ ದಿನಾಚರಣೆ ಕಾರ್ಯಕ್ರಮ

0

ಬೆಳ್ತಂಗಡಿ : ರಾಷ್ಟ್ರೀಯ ಕೈ ಮಗ್ಗ ದಿನಾಚರಣೆಯ ಅಂಗವಾಗಿ ಕೈಮಗ್ಗ ನೇಕಾರಿಕೆಗೆ ಉತ್ತೇಜನ ಮತ್ತು ಉತ್ಪನ್ನಗಳಿಗೆ ಪ್ರಚಾರವನ್ನು ನೀಡುವ ಸಲುವಾಗಿ ರಾಷ್ಟ್ರೀಯ ಕೈಮಗ್ಗ ದಿನವನ್ನು ಆಚರಿಸಲಾಗುತ್ತದೆ. ಸ್ವದೇಶಿ ಚಳವಳಿಯ ನೆನಪಿಗಾಗಿ 2015 ರ ಆ. 7ರಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಕೈಮಗ್ಗ ದಿನಕ್ಕೆ ಚಾಲನೆ ನೀಡಿದ್ದರು.

ಆ.7ರಂದು ರಾಷ್ಟ್ರೀಯ ಕೈಮಗ್ಗದ ದಿನಾಚರಣೆಯ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾದ ವತಿಯಿಂದ ಲಾಯಿಲದಲ್ಲಿರುವ ಸಿರಿ ಗ್ರಾಮೋದ್ಯೋಗ ಸಂಸ್ಥೆ ಗೆ ತೆರಳಿ, ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಖಾದಿಯ ಬಟ್ಟೆಗಳನ್ನು ಖರೀದಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಮಂಡಲ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ, ಪ್ರಧಾನ ಕಾರ್ಯದರ್ಶಿಗಳಾದ ಪೂರ್ಣಿಮಾ ಜಯಂತ್ ಹಾಗೂ ತುಳಸಿ ಉಮೇಶ್, ಸದಸ್ಯರಾದ ರಶ್ಮಿ ಪಠವರ್ಧನ್ ಹಾಗೂ ಶ್ರೀಲಕ್ಷ್ಮಿ ರಾವ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here