Site icon Suddi Belthangady

ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಪ್ರಸಾರ: ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ: ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಅಪರಾಧ ಕೃತ್ಯಗಳನ್ನು ನಡೆಸಲು ದುಷ್ಪ್ರೇರಣೆಯಾಗುವಂತೆ ಅಶ್ಲೀಲವಾಗಿ ಹಾಗೂ ಸಾರ್ವಜನಿಕರಿಗೆ ಕಿರಿಕಿರಿಯುಂಟುಮಾಡುವ ರೀತಿಯಲ್ಲಿ ಮಾತನಾಡಿರುವ ವೀಡಿಯೋ ಹಾಕಿರುವ ಬಗ್ಗೆ ಹೋರಾಟಗಾರ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ಬಗ್ಗೆ ಬೆಳ್ತಂಗಡಿ ನಿವಾಸಿ ಚರಣ್ ಶೆಟ್ಟಿ ಎಂಬವರು ದೂರು ನೀಡಿದ್ದು ಅದರಂತೆ ಬೆಳ್ತಂಗಡಿ ಠಾಣೆಯಲ್ಲಿ ಕಲಂ 57, 296, ಜೊತೆಗೆ 190 ಬಿಎನ್.ಎಸ್ 2023 ರಂತೆ ಪ್ರಕರಣ ದಾಖಲಿಸಲಾಗಿದೆ.

ಮಹೇಶ್ ಶೆಟ್ಟಿ ತಿಮರೋಡಿ ವಿರುದ್ದ ಪ್ರಕರಣ ದಾಖಲು: ಮಹೇಶ್ ಶೆಟ್ಟಿ ತಿಮರೋಡಿ ಅವರು ಯುಟ್ಯೂಬ್ ನಲ್ಲಿ ಪ್ರದೇಶಿಕವಾಗಿ ಜನರ ನಡುವೆ ವೈಮನಸ್ಸು ಉಂಟುಮಾಡುವ ಹಾಗೂ ಸಾರ್ವಜನಿಕರಲ್ಲಿ ಅಪಾಯದ ಭೀತಿಯನ್ನುಂಟುಮಾಡುವ ಹೇಳಿಕೆಗಳನ್ನು ಪ್ರಚಾರ ಮಾಡಿರುವ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ 353(2), ಬಿ.ಎನ್.ಎಸ್. ನಂತೆ ಪ್ರಕರಣ ದಾಖಲಿಸಲಾಗಿದೆ.

Exit mobile version