Site icon Suddi Belthangady

ಉಜಿರೆ: ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಐಸ್ ಬ್ರೇಕ್’ ಕಾರ್ಯಕ್ರಮ

ಉಜಿರೆ: ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಿದ್ಯಾರ್ಥಿಗಳು ಪರಸ್ಪರ ಅರಿತು ಮುನ್ನಡೆಯುವುದಕ್ಕೆ ಪೂರಕವಾದ ‘ಐಸ್ ಬ್ರೇಕ್’ ಕಾರ್ಯಕ್ರಮ ಆ.7ರಂದು ನಡೆಯಿತು.

ಉಜಿರೆ ಎಸ್.ಡಿ.ಎಂ. ಕಾಲೇಜಿನ ಕಲಾಕೇಂದ್ರದ ರಂಗ ನಿರ್ದೇಶಕ ಯಶವಂತ್ ಬೆಳ್ತಂಗಡಿ ಅವರು ಸಂಪನ್ಮೂಲ ವ್ಯಕ್ತಿಯಾಗಿದ್ದರು. ಮಾತನಾಡಿದ ಅವರು, “ನಾವೆಲ್ಲರೂ ಕ್ರಿಯಾಶೀಲ ವ್ಯಕ್ತಿತ್ವ ಬೆಳೆಸಿಕೊಳ್ಳಬೇಕು. ನಮ್ಮಲ್ಲಿ ಯಾವುದೇ ಭೇದ-ಭಾವ ಇಟ್ಟುಕೊಳ್ಳದೆ ನಾವೆಲ್ಲಾ ಒಂದೇ ಎಂಬ ಮನೋಭಾವದಿಂದ ಕೆಲಸ ಕಾರ್ಯಗಳನ್ನು ಮಾಡಬೇಕು. ಆಗ ಯಶಸ್ಸು ಖಂಡಿತ” ಎಂದರು.

ವಿದ್ಯಾರ್ಥಿಗಳಿಗೆ ವಿವಿಧ ಮನೋರಂಜನೆಯ ಆಟ ಆಡಿಸುವ ಜೊತೆಗೆ, ಕೈ ಮುಗಿದು ನಮಸ್ಕಾರ ಮಾಡುವ ಉದ್ದೇಶ, ಅರ್ಥ ತಿಳಿಸಿದರಲ್ಲದೆ, ಕಾರ್ಯಕ್ರಮ ಸಂಯೋಜನೆ, ಸ್ವಾಗತ ಹಾಗೂ ಧನ್ಯವಾದ ಸಮರ್ಪಿಸುವ ರೀತಿ ಕುರಿತು ಪ್ರಾಯೋಗಿಕ ಮಾಹಿತಿ ನೀಡಿದರು.

ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್ ಸ್ವಾಗತಿಸಿದರು. ಪ್ರಮಿತ ಮತ್ತು ಪೌಜಿಯ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Exit mobile version