ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿಯ ಎಸ್ಐಟಿ ಕಚೇರಿ ಎಸ್ಐಟಿ ಪೊಲೀಸ್ ಠಾಣೆಯಾಗಿ ಬದಲಾಯಿಸಲು ಡಿಜಿ,ಐಜಿಪಿ ಡಾ.ಎಂ.ಎ ಸಲೀಂ ಆದೇಶಿಸಿದ್ದಾರೆ.
ಇನ್ಮುಂದೆ ಶವ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಯಾವುದೇ ದೂರುಗಳಿದ್ದರು ಬೆಳ್ತಂಗಡಿ ಎಸ್ಐಟಿ ಪೊಲೀಸ್ ಠಾಣೆಯಲ್ಲಿಯೇ ದಾಖಲು ಮಾಡಲು ಅವಕಾಶ ನೀಡುವ ಉದ್ದೇಶದಿಂದ ಹೀಗೆ ಬದಲಾವಣೆ ಮಾಡಲಾಗಿದೆ.
ಈ ಹಿಂದೆ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡುವಂತೆ ಹಿಂಬರಹ ಎಸ್ ಐ ಟಿ ನೀಡುತ್ತಿತ್ತು. ಆದರೆ ಇನ್ನು ಮುಂದೆ ಎಸ್ ಐ ಟಿ ಪೊಲೀಸ್ ಠಾಣೆಯಲ್ಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸಬಹುದಾಗಿದೆ.