Site icon Suddi Belthangady

ಮಲೆಬೆಟ್ಟು: ವನದುರ್ಗಾ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ

ಕೊಯ್ಯೂರು: ಮಲೆಬೆಟ್ಟು ಶ್ರೀ ವನದುರ್ಗಾ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜಾ ಸಮಿತಿಯಿಂದ ಶ್ರೀ ವರಮಹಾಲಕ್ಷ್ಮಿ ಪೂಜೆಯು ಶ್ರದ್ಧಾ ಭಕ್ತಿಯಿಂದ ಆ.8ರಂದು ನಡೆಯಿತು.
ಶ್ರೀ ವರಮಹಾಲಕ್ಷ್ಮೀ ಮಹಿಳಾ ವ್ರತಧಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು. ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು, ಶ್ರೀ ವನದುರ್ಗಾ ದೇವಾಲಯ ಆಡಳಿತ ಮೊಕ್ತೆಸರರು ಮತ್ತು ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

Exit mobile version