
ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನ, ವಿಶ್ವ ಹಿಂದೂ ಪರಿಷತ್, ಬಜರಂಗದಳ ಹಾಗೂ ಮಾತೃ ಮಂಡಳಿ ಚಾರ್ಮಾಡಿ ಇವರ ಸಂಯುಕ್ತ ಆಶ್ರಯದಲ್ಲಿ 24ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ಪೂಜೆಯು ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಉಪಾಧ್ಯಯ ಹಾಗೂ ಮಧುಸೂದನ್ ಕಾನರ್ಪ ಅವರ ನೇತೃತ್ವದಲ್ಲಿ ಆ.8ರಂದು ಚಾರ್ಮಾಡಿ, ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಜರಗಿತು.
ಮಾತೃ ಮಂಡಳಿಯ ಅಧ್ಯಕ್ಷೆ ಚಂದ್ರಾವತಿ ಕೆ. ಆಂತ್ರೊಟ್ಟು, ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಪ್ರಕಾಶ್ ಹೊಸಮಠ, ಚಾರ್ಮಾಡಿ ವಿಶ್ವಹಿಂದೂ ಪರಿಷತ್ ನ ಅಧ್ಯಕ್ಷ ಜಿತೇಂದ್ರ ಆರ್ತಿತ್ತಿಲ್, ಸಮಿತಿ ಪದಾಧಿಕಾರಿಗಳು ಹಾಗೂ ಊರ ಭಕ್ತರು ಪಾಲ್ಗೊಂಡಿದ್ದರು.