
ಧರ್ಮಸ್ಥಳ: ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆ.9ರಂದು 16ನೇ ಗುರುತಿನ ಕಾರ್ಯಾಚರಣೆ ಆರಂಭವಾಗಿದೆ. ಧರ್ಮಸ್ಥಳದ ಬಾಹುಬಲಿ ಬೆಟ್ಟದ ಸಮೀಪದಲ್ಲಿ ಸ್ಥಳವನ್ನು ಗುರುತಿಸಿ, ಹೇಳಿಕೆಗಳನ್ನು SIT ಅಧಿಕಾರಿಗಳು ವಿಡಿಯೋ ಮಾಡಿದ್ದಾರೆ.

ಮುಸುಕು ದಾರಿಯನ್ನು ಸ್ಥಳಕ್ಕೆ ಕರೆದುಕೊಂಡು ಹೋಗಿ ಅದೇ ದಿನ ಗುರುತು ಮಾಡಿಸಿ ಉತ್ಖನನ ಕಾರ್ಯವನ್ನು ನಡೆಸಲಾಗುತ್ತಿದೆ. ಯಾಕೆಂದರೆ ಸ್ಥಳವನ್ನು ಮೊದಲೇ ಗುರುತಿಸಿದರೆ ಅಲ್ಲಿ ಸಂಪೂರ್ಣ ಭದ್ರತೆಯನ್ನು ನೀಡಬೇಕಾಗುತ್ತದೆ ಎಂಬ ಉದ್ದೇಶದಿಂದ ಎಸ್.ಐ.ಟಿ ಅಧಿಕಾರಿಗಳು ಕಛೇರಿಯಲ್ಲಿ ಸಭೆ ನಡೆಸಿದ ನಂತರ ಹೊಸ ಜಾಗದಲ್ಲಿ ಗುರುತು ನಡೆಸಿ ಉತ್ಖನನ ಕಾರ್ಯ ಪ್ರಾರಂಭಿಸುತ್ತಾರೆ.
ಧರ್ಮಸ್ಥಳ ಗ್ರಾಮ ಮತ್ತು ಆಸುಪಾಸಿನ ಪ್ರದೇಶದಲ್ಲಿ ಕೊಲೆಯಾದ ಮತ್ತು ಅತ್ಯಾಚಾರಕ್ಕೀಡಾಗಿ ಕೊಲೆಯಾದ ಮೃತದೇಹಗಳನ್ನು ಬೆದರಿಸಿ ಹೂತು ಹಾಕಿಸಲಾಗಿದೆ ಎಂದು ದೂರು ದಾಖಲಿಸಿರುವ ಅನಾಮಧೇಯ ವ್ಯಕ್ತಿಯೊಂದಿಗೆ ಎಸ್.ಐ.ಟಿ. ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಿರಂತರವಾಗಿ ಶೋಧ ಕಾರ್ಯ ನಡೆಸಲಾಗುತ್ತಿದ್ದು, ಸ್ಥಳದಲ್ಲಿ ಭದ್ರತೆಯ ದೃಷ್ಟಿಯಿಂದ ಹೆಚ್ಚುವರಿ ಪೋಲಿಸ್ ನಿಯೋಜನೆ ಮಾಡಲಾಗಿದೆ.