ಧರ್ಮಸ್ಥಳ: ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೀವನ ಕೌಶಲ್ಯ ಕಾರ್ಯಾಗಾರ

0

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಜೀವನ ಕೌಶಲಗಳ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮುಖ್ಯ ತರಬೇತುಗಾರರಾಗಿ ಉಜಿರೆ ಎಸ್. ಡಿ. ಎಂ ರೆಸಿಡೆನ್ಶಿಯಲ್ ಕಾಲೇಜ್ ಪ್ರಾಂಶುಪಾಲ ಸುನಿಲ್ ಪಂಡಿತ್ ಮುಖ್ಯ ಅತಿಥಿಗಳಾಗಿ ಆಗಮಿಸಿ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು ವಿದ್ಯಾರ್ಥಿಗಳಿಗೆ ಸಮಸ್ಯೆಗಳನ್ನು ಎದುರಿಸುವುದು, ನಿರ್ಧಾರ ತೆಗೆದುಕೊಳ್ಳುವುದು, ಸಮನ್ವಯತೆ, ಸಂವಹನ ಕೌಶಲಗಳು ಮತ್ತು ಭಾವನೆಗಳ ನಿಯಂತ್ರಣ ಮುಂತಾದ ವಿಷಯಗಳ ಬಗ್ಗೆ ವಿವರಣೆ ನೀಡಲಾಯಿತು.

ಶಾಲಾ ಮುಖ್ಯೋಪಾಧ್ಯಾಯನಿ ಪರಿಮಳ ಎಂ.ವಿ. ಮಾತನಾಡಿ ಇಂತಹ ತರಬೇತಿಗಳು ಮಕ್ಕಳಲ್ಲಿ ಹೊಸ ಹುರುಪನ್ನು ತರುತ್ತದೆ ಎಂದು ಮಕ್ಕಳಿಗೆ ಮನದಟ್ಟು ಮಾಡಿದರು. ಕಾರ್ಯಕ್ರಮದಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳು, ಅಧ್ಯಾಪಕರು ಭಾಗವಹಿಸಿದ್ದರು. ನಿವೇದಿಯ ಸ್ವಾಗತಿಸಿ, ಹತ್ತನೇ ತರಗತಿಯ ಸಿಂಧೂರ ನಿರ್ವಹಿಸಿದರು. ಆಶ್ರೀತಾ ಧನ್ಯವಾದ ಸಲ್ಲಿಸಿದರು.

LEAVE A REPLY

Please enter your comment!
Please enter your name here