
ಉರುವಾಲು: ಶ್ರೀ ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಸಹೋದರ ಸಹೋದರಿಯರ ಬಾಂಧವ್ಯ ಬೆಸೆಯುವ ರಕ್ಷಾಬಂಧನ ಕಾರ್ಯಕ್ರಮವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು.
ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಸಾಂಪ್ರದಾಯಿಕ ಉಡುಗೆ ತೊಟ್ಟು ರಕ್ಷಾಬಂಧನ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಕಿರಿಯ ವಿದ್ಯಾರ್ಥಿಗಳು ಹಿರಿಯ ವಿದ್ಯಾರ್ಥಿಗಳಿಗೆ ಹಣೆಗೆ ತಿಲಕವನ್ನಿಟ್ಟು ಆರತಿ ಬೆಳಗಿ ಕೈಗೆ ರಕ್ಷೆಯನ್ನು ಕಟ್ಟುವ ಮೂಲಕ ಅಣ್ಣ ತಂಗಿ ಬಾಂಧವ್ಯವನ್ನು ಇತರ ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ಬಳಿಕ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ಉಡುಗೊರೆ ಯನ್ನು ನೀಡಿ ಹಾರೈಸಿದರು. ಈ ಕಾರ್ಯಕ್ರಮದಲ್ಲಿ ಶಿಕ್ಷಕ ವೃಂದದವರು ಹಾಜರಿದ್ದು, ವಿದ್ಯಾರ್ಥಿಗಳ ಸಂಭ್ರಮದಲ್ಲಿ ಪಾಲ್ಗೊಂಡರು.