ಕುಕ್ಕೆಡಿ: ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

0

ಕುಕ್ಕೆಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ.9ರಂದು ನಡೆದ ಕುಕ್ಕೆಡಿ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಸಭೆಯಲ್ಲಿ ಕಾರ್ಯಕ್ರಮ ಉದ್ಘಾಟಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹಾಗೂ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರು ಪಾಲ್ಗೊಂಡು ಕಾರ್ಯಕರ್ತರೊಂದಿಗೆ ಪಕ್ಷ ಸಂಘಟನೆ ಮತ್ತು ಕಾರ್ಯಚಟುವಟಿಕೆಯ ಕುರಿತು ವಿಸ್ತ್ರುತವಾಗಿ ಸಮಾಲೋಚನೆ ನಡೆಸಿದರು.

ಜಿಲ್ಲಾ ಉಪಾಧ್ಯಕ್ಷರಾದ ಜಯಂತ್ ಕೋಟ್ಯಾನ್, ಜಿಲ್ಲಾ ಮಾಧ್ಯಮ ಪ್ರಮುಖ್ ಸುಬ್ರಮಣ್ಯ ಅಗರ್ತ,ಮಂಡಲ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಜಯಾನಂದ ಗೌಡ ಪ್ರಜ್ವಲ್, ಪ್ರಶಾಂತ್ ಪಾರೆಂಕಿ, ಉಪಾಧ್ಯಕ್ಷ ಮೋಹನ್ ಅಂಡಿಂಜೆ, ಆಳದಂಗಡಿ ಮಹಾಶಕ್ತಿ ಕೇಂದ್ರ ಕಾರ್ಯದರ್ಶಿ ಮಾಧವ ಶಿರ್ಲಾಲು, ಅಭ್ಯಾಸವರ್ಗ, ಸಂಚಾಲಕ ಕೊರಗಪ್ಪ ಗೌಡ ಚಾರ್ಮಾಡಿ, ಸಹಸಂಚಾಲಕ ದಿನಕರ ಕುಲಾಲ್, ಪಡoಗಡಿ ಹಾಗೂ ಶಕ್ತಿ ಕೇಂದ್ರ ಪ್ರಮುಖ್, ಅನ್ಯನ್ಯ ಜವಾಬ್ದಾರಿ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here