
ಬೆಳ್ತಂಗಡಿ: ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಮತ್ತು ಮಾನಸಿಕ ನೆಮ್ಮದಿಯನ್ನು ಪಡೆದುಕೊಳ್ಳಬಹುದು ಎಂದು ವಾಣಿ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ನಾರಾಯಣಗೌಡ ಹೇಳಿದರು. ಅವರು ವಾಣಿ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಶಟಲ್ ಬಾಡ್ಮಿಂಟನ್ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡುತ್ತಾ, ಸೋಲು ಗೆಲುವಿನ ಬಗ್ಗೆ ಯೋಚಿಸದೆ ಕ್ರೀಡಾ ಸ್ಪೂರ್ತಿಯಿಂದ ತೊಡಗಿಸಿಕೊಳ್ಳಬೇಕು ಎಂದರು.
ವಾಣಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಗಣೇಶ್ ಗೌಡ ಅಧ್ಯಕ್ಷತೆ ವಹಿಸಿದ್ದರು. ಬೆಳ್ತಂಗಡಿ ತಾಲೂಕು ಕ್ರೀಡಾ ಸಯೋಜಕ ಸಂದೀಪ್ ಕುಮಾರ್, ವಾಣಿ ಶಿಕ್ಷಣ ಸಂಸ್ಥೆಯ ಆಡಳಿತ ಅಧಿಕಾರಿ ಪ್ರಸಾದ್ ಕುಮಾರ್, ಕಾಲೇಜಿನ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ, ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಲಕ್ಷ್ಮಿನಾರಾಯಣ ಕೆ. ಉಪಸಿತರಿದ್ದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸುರೇಂದ್ರ ಸ್ವಾಗತಿಸಿದರು. ಉಪನ್ಯಾಸಕಿ ಕಾಮಾಕ್ಷಿ ಕಾರ್ಯಕ್ರಮ ನಿರೂಪಿಸಿದರು.ಸುಧೀರ್ ಕೆ. ಎನ್. ಧನ್ಯವಾದವಿತ್ತರು.