
ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ವಾಣಿ ಪದವಿ ಪೂರ್ವ ಬಾಲಕಿಯರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಹಾಗೆಯೇ ಬಾಲಕರ ತಂಡ ದ್ವೀತಿಯ ಸ್ಥಾನ ಗಳಿಸಿಕೊಂಡಿದೆ. ಆ.9ರಂದು ಅಪರಾಹ್ನ ನಡೆದ ಸಮಾರೋಪ ಸಮಾರಂಭದಲ್ಲಿ ವಿಜೇತ ತಂಡಗಳಿಗೆ ಬಹುಮಾನ ವಿತರಿಸಲಾಯಿತು.
ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪಿ. ಕುಶಾಲಪ್ಪ ಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ವಾಣಿ ಶಿಕ್ಷಣ ಸಂಸ್ಥೆಯ ಗೌರವಾಧ್ಯಕ್ಷ ಪದ್ಮ ಗೌಡ ಹೆಚ್., ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆ.ಎಂ., ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸುರೇಂದ್ರ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ. ಸ್ವಾಗತಿಸಿದರು. ಉಪನ್ಯಾಸಕಿ ಶ್ರಾವ್ಯ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕ ಶಂಕರ್ ರಾವ್ ಧನ್ಯವಾದವಿತ್ತರು.