
ಗೇರುಕಟ್ಟೆ: ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ ಆ.10 ರಂದು ಸಂಘದ ಅಧ್ಯಕ್ಷ ವಸಂತ ಮಜಲು ಅಧ್ಯಕ್ಷತೆಯಲ್ಲಿ ಸಂಘದ ಸಭಾಭವನದಲ್ಲಿ ನಡೆಯಿತು.
ಸಂಘವು ಉತ್ತಮ ಲಾಭದಲ್ಲಿ ಇದ್ದು ಪ್ರಸಕ್ತ ಸಾಲಿನಲ್ಲಿ ರೂ300.34 ಕೋಟಿ ವ್ಯವಹಾರ ನಡೆಸಿ,ರೂ.1.13 ಕೋಟಿ ನಿವ್ವಳ ಲಾಭಗಳಿಸಿದ್ದು ಸದಸ್ಯರಿಗೆ 16 ಶೇಕಡಾ ಡಿವಿಡೆಂಡ್ ನೀಡುವುದಾಗಿ ಸಂಘದ ಅಧ್ಯಕ್ಷ ವಸಂತ ಮಜಲು ಘೋಷಿಸಿದರು.
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವ್ಯಕ್ತಿಗಳನ್ನು ಸನ್ಮಾನಿಸಲಾಯಿತು. ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಸಭೆಯಲ್ಲಿ ಸಂಘದ ಉಪಾಧ್ಯಕ್ಷ ರಾಜ್ ಪ್ರಕಾಶ್, ನಿರ್ದೇಶಕರಾದ ಯಂ ಹರಿದಾಸ ಪಂಡತ್ತಾಯ, ಶೇಖರ್ ನಾಯ್ಕ, ಚಂದ್ರಾವತಿ, ಮಮತಾ, ಗೋಪಾಲ ನಾಯ್ಕ್, ಕುಶಾಲಪ್ಪ ಗೌಡ, ಬಾಲಕೃಷ್ಣ ಗೌಡ ಬಿರ್ಮೊಟ್ಟು, ಉದಿತ್ ಕುಮಾರ್, ಲೋಕೇಶ್ ನಾಳ, ಕೇಶವ ಪೂಜಾರಿ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕವಿತಾ, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಪ್ರತಿನಿಧಿ ಸುದರ್ಶನ್ ಉಪಸ್ಥಿತರಿದ್ದರು.
ನಿರ್ದೇಶಕ ಶೇಖರ್ ನಾಯ್ಕ ಸ್ವಾಗತಿಸಿ, ಸಿಬ್ಬಂದಿ ಸಂತೋಷ್ ಕುಮಾರ್ ಧನ್ಯವಾದವಿತ್ತರು.