
ಬೆಳ್ತಂಗಡಿ: ಲಾಯಿಲ ಶ್ರೀ ಗುರುರಾಘವೇಂದ್ರ ಸೇವಾ ಪ್ರತಿಷ್ಠಾಪನಾ ದಲ್ಲಿ ಆ.10ರಿಂದ 12ರವರೆಗೆ ನಡೆಯುವ ರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾಮಹೋತ್ಸವದ ಅಂಗವಾಗಿ ಆ. 10ರಂದು ಶ್ರೀ ಗಣಪತಿ ಹೋಮದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಕಾರ್ಯಕ್ರಮವನ್ನು ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಮುರಳಿ ಬಲಿಪ ಬೆಳ್ತಂಗಡಿ ತುಳು ಶಿವಳ್ಳಿ ಸಭಾ ಒಕ್ಕೂಟದ ಅಧ್ಯಕ್ಷ ಶ ರಾಜ ಪ್ರಸಾದ್ ಪೊಳ್ನಾಯ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಪ್ರತಿಷ್ಠಾನದ ಅಧ್ಯಕ್ಷ ಪೀತಾಂಬರ ಹೇರಾಜೆ ವಹಿಸಿದ್ದರು.
ಲಾಯಿಲ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸುಗಂಧಿ ಜಗನ್ನಾಥ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ವೇದಿಕೆಯಲ್ಲಿ ಉಪಾಧ್ಯಕ್ಷ ವಿ .ಆರ್ .ನಾಯಕ್, ಮಹಾಬಲ ಶೆಟ್ಟಿ, ಟ್ರಸ್ಟಿ ಸೋಮೇಗೌಡ, ಸುಶೀಲ ಹೆಗ್ಡೆ ಉಪಸ್ಥಿತರಿದ್ದರು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಟ್ರಸ್ಟಿ ನಿವೃತ್ತ ಪ್ರಾಂಶುಪಾಲ ಪ್ರೊ. ಎ. ಕೃಷ್ಣಪ್ಪ ಪೂಜಾರಿ ಪ್ರಾಸ್ತಾವಿಸಿ ಸ್ವಾಗತಿಸಿದರು. ಪ್ರತಿಷ್ಠಾನದ ಕಾರ್ಯದರ್ಶಿ ವಸಂತ ಸುವರ್ಣ ವಂದಿಸಿದರು.