
ಬೆಳ್ತಂಗಡಿ: ಉತ್ತರ ಕನ್ನಡ ಜಿಲ್ಲೆಯ ಕುಮುಟಾ ತಾಲೂಕಿನ ಕೋನಳ್ಳಿ ವನದುರ್ಗಾ ದೇವಸ್ಥಾನದಲ್ಲಿ ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತಾಚರಣೆ ಸಂದರ್ಭದಲ್ಲಿ ಆ. 10ರಂದು ಕರ್ನಾಟಕ ಸರಕಾರದ ಮೀನು ಗಾರಿಕೆ, ಬಂದರು ಮತ್ತು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಾಂಕಾಳ್ ಎಸ್. ವೈದ್ಯ ಭೇಟಿಯಾಗಿ ಗುರುಗಳ ಆಶೀರ್ವಾದ ಪಡೆದರು.