
ಉಜಿರೆ: ರಾಷ್ರ್ಟೀಯ ಹಿಂದೂ ಜಾಗರಣಾ ವೇದಿಕೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ ನಡೆಯುವ 28ನೇ ವರ್ಷದ ಶ್ರೀ ಗೌರಿ ಪೂಜೆ ಮತ್ತು ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಮತ್ತು ರಕ್ಷಾಬಂಧನ ಕಾರ್ಯಕ್ರಮವು ಆ.9ರಂದು ಕುಂಜರ್ಪದಲ್ಲಿ ನಡೆಯಿತು.
ರಾಷ್ರ್ಟೀಯ ಹಿಂದೂ ಜಾಗರಣಾ ವೇದಿಕೆಯ ಸಂಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ, ಗೌರವ ಅಧ್ಯಕ್ಷ ಹರೀಶ್ ಕುಮಾರ್ ಬರಮೇಲು, ಅಧ್ಯಕ್ಷ ಅನಿಲ್ ಕುಮಾರ್ ಅಂತರ, ಸಂಚಾಲಕ ಮನೋಜ್ ಕುಮಾರ್, ಕಾರ್ಯದರ್ಶಿ ಸಂದೀಪ್ ಶೆಟ್ಟಿ ಹಾಗೂ ಇನ್ನೂ ಅನೇಕ ಸರ್ವಸದಸ್ಯರು ಉಪಸ್ಥಿತರಿದ್ದರು.