ನಡ: ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿ, ಮಹಿಳಾ ಘಟಕ ಮತ್ತು ಯುವ ವೇದಿಕೆಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ ಆ. 10ರಂದು ಅಂಬೇಡ್ಕರ್ ಭವನದಲ್ಲಿ ನಡೆಯಿತು. ನಡ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಮಹಿಳಾ ಘಟಕದ ಅಧ್ಯಕ್ಷೆ ಸೌಮ್ಯ ಯತೀಶ್ ಗೌಡ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ತಾಲೋಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಧಾರ್ಮಿಕ ಮುಖಂಡ ಹಾಗೂ ಉದ್ಯಮಿಗಳಾದ ಕಿರಣ್ ಚಂದ್ರ ಡಿ. ಪುಷ್ಪಗಿರಿ, ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಯುವ ವೇದಿಕೆಯ ಅಧ್ಯಕ್ಷ ಚಂದ್ರಕಾಂತ್ ನಿಡ್ಡಾಜೆ, ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಗೀತಾ ರಾಮಣ್ಣ ಗೌಡ ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಅಳದಂಗಡಿ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದ ವಾರ್ಡನ್ ಹೇಮಲತಾ ಎಂ. ಆಗಮಿಸಿದ್ದರು. ನಡ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಶ್ಯಾಮ್ ಸುಂದರ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದರು. ನಿವೃತ ಪೊಲೀಸ್ ಉಪನಿರಿಕ್ಷಕ ಬಿ.ಪಿ. ಪುರಂದರ ಗೌಡ ಬೋಜಾರ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಹಿರಿಯ ಮೇಲ್ಬಿಚಾರಕರಾಗಿ ನಿವೃತ್ತಿ ಹೊಂದಿರುವ ರತ್ನಾವತಿ ಅವರನ್ನು ಸನ್ಮಾನಿಸಲಾಯಿತು.
2024-25ರ ಸಾಲಿನಲ್ಲಿ ಎಸ್. ಎಸ್. ಎಲ್. ಸಿ ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾದ ಸ್ವಜಾತಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಿತು.
ಮಹಿಳೆಯರಿಗೆ ಮತ್ತು ಮಕ್ಕಳಿಗೆ ವಿವಿಧ ಸ್ಪರ್ಧೆಯನ್ನು ಏರ್ಪಡಿಸಿದ್ದು ಮದ್ಯಾಹ್ನ ಕಾರ್ಯಕ್ರಮದಲ್ಲಿ ಭಾಗವಹಿಸಿದವರಿಗೆ ಕಿರಣ್ ಚಂದ್ರ ಪುಷ್ಪಗಿರಿಯವರು ಬಿರಿಯಾನಿ ಮತ್ತು ಕಬಾಬ್ ಊಟವನ್ನು ನೀಡಿ ಕಾರ್ಯಕ್ರಮಕ್ಕೆ ಶುಭಾಶಯ ಕೋರಿದರು.