ಬೆಳ್ತಂಗಡಿ: ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಿಂದ 354ನೇ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ

0

ಬೆಳ್ತಂಗಡಿ: ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಲ್ಲಿ 354ನೇ ಶ್ರೀ ಗುರುರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವವು ಅತ್ಯಂತ ವಿಜೃಂಭಣೆಯಿಂದ ಆ.11ರಂದು ನಡೆಯಿತು.

ಕ್ಷೇತ್ರದ ಬರುವ ಭಕ್ತರ ಅನುಕೂಲಕ್ಕಾಗಿ ಸುಮಾರು ರೂ 7.50 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ಗುರುಪ್ರಸಾದ ಮಂಟಪದ ಉದ್ಘಾಟನೆಯನ್ನು ನೆರವೇರಿಸಲಾಯಿತು.

ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಪೀತಾಂಬರ ಹೇರಾಜೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಹೊಸಪೇಟೆ ವಿಧಾಸಭಾ ಸದಸ್ಯ ಎಚ್.ಆರ್. ಗವಿಯಪ್ಪ, ಗಂಗಾವತಿ ಶಾಸಕ ಹೆಚ್.ಎಸ್. ಮುರಳೀಧರ್, ಧಾರ್ಮಿಕ ಮುಖಂಡ ಕಿರಣ್‌ಚಂದ್ರ ಪುಷ್ಪಗಿರಿ, ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವಾರಂ, ಚಿಕ್ಕಬಳ್ಳಾಪುರ ಶ್ರೀ ನಾಗನಾಧೇಶ್ವರ ದೇವಸ್ಥಾನದ ಧರ್ಮದರ್ಶಿ ನಾರಾಯಣ ಬೇಗೂರು, ಟ್ರಸ್ಟಿ ಸುಜಿತಾ ವಿ. ಬಂಗೇರ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.

ವಿಜಯರತ್ನ ಪ್ರಶಸ್ತಿ ಪುರಸ್ಕೃತ ಗುರುವಾಯನಕೆರೆ ಎಕ್ಸೆಲ್ ವಿದ್ಯಾ ಸಂಸ್ಥೆ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಎಚ್.ಆರ್. ಗವಿಯಪ್ಪ, ಹೆಚ್.ಎಸ್. ಮುರಳೀಧರ್ ಹಾಗೂ ಬೆಳ್ತಂಗಡಿ ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಸಾದ್ ಶೆಟ್ಟಿ ಏಣಿಂಜೆ ಅವರನ್ನು ಗೌರವಿಸಲಾಯಿತು. ಭಜನಾ ಕಾರ್ಯಕ್ರಮ, ಭಕ್ತಿ ರಸಮಂಜರಿ ಜರುಗಿತು. ಪ್ರಸಿದ್ಧಿ ಪ್ರಾರ್ಥನೆಗೈದರು. ಗೌರವ ಸಲಹೆಗಾರ ಎಸ್.ಡಿ.ಎಂ ನಿವೃತ್ತ ಪ್ರಾಂಶುಪಾಲ ಡಾ.ಬಿ.ಎ. ಕುಮಾರ ಹೆಗ್ಡೆ ಪ್ರಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಸೇವಾ ಪ್ರತಿಷ್ಠಾನದ ಟ್ರಸ್ಟಿಗಳು, ಪದಾಧಿಕಾರಿಗಳು ಸಹಕರಿಸಿದರು.

LEAVE A REPLY

Please enter your comment!
Please enter your name here