
ಉಜಿರೆ: ಆ.10ರಂದು ಬೆಳ್ತಂಗಡಿ ರೋಟರಿ ಕ್ಲಬ್, ಲಯನ್ಸ್ ಕ್ಲಬ್ ಹಾಗೂ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಸಹಭಾಗಿತ್ವದಲ್ಲಿ ಬೆಳ್ತಂಗಡಿ ತಾಲೂಕಿನ ಶಾಲಾ ಹಾಗೂ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಆ.10ರಂದು “ರೋಟಾಲಯ” ಸಂಗೀತ ಸ್ಪರ್ಧೆಯನ್ನು ಬೆಳ್ತಂಗಡಿಯ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾದಲ್ಲಿ ಆಯೋಜಿಸಲಾಗಿತ್ತು.
ಈ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ಭಾಗವಹಿಸಿ, ಪ್ರೌಢಶಾಲೆ ವಿಭಾಗದ ವೈಯಕ್ತಿಕ ಭಾವಗೀತೆ ಸ್ಪರ್ಧೆಯಲ್ಲಿ 10ನೇ ತರಗತಿ ಸ್ವಸ್ತಿಶ್ರೀ ದ್ವಿತೀಯ, ಪ್ರಾಥಮಿಕ ವಿಭಾಗದಲ್ಲಿ 4ನೇ ತರಗತಿ ಸನ್ನಿಧಿ ಪ್ರಥಮ ಹಾಗೂ ದೇಶಭಕ್ತಿಗೀತೆ ಸಮೂಹ ಗಾಯನ ಸ್ಪರ್ಧೆಯಲ್ಲಿ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ ಪಡೆದು ವಿಜೇತರಾಗಿರುತ್ತಾರೆ. ಭಾಗವಹಿಸಿದ ಹಾಗೂ ವಿಜೇತರಾದ ವಿದ್ಯಾರ್ಥಿಗಳನ್ನು ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದದಿಂದ ಅಭಿನಂದಿಸಲಾಯಿತು.