ಮಡಂತ್ಯಾರು: ಆ. 5ರಂದು ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ಸಹಯೋಗದಲ್ಲಿ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಬಾಲಕ ಮತ್ತು ಬಾಲಕಿಯರ ಒಳಾಂಗಣ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವು ಸೇಕ್ರೆಟ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಮಡಂತ್ಯಾರಿನಲ್ಲಿ ನಡೆಯಿತು.
ಮಕ್ಕಳ ಪ್ರಾರ್ಥನೆದೊಂದಿಗೆ ಸಭಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಯಾದ ಶ್ರೀಮತಿ ಸುಜಯ.ಬಿ ರವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಪ್ರೀತಿ ಜಾರ್ಜ್ ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಭಾ ಕಾರ್ಯಕ್ರಮದಲ್ಲಿ ಶಾಲಾ ಸಂಚಾಲಕಿಯಾದ ಸಿಸ್ಟರ್ ಎಲ್ಸಿ ಪಾಲೆಟ್, ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ರೆಜಿ ಜಾರ್ಜ್, ಸೇಕ್ರೆಟ್ ಹಾರ್ಟ್ ಕಾಲೇಜಿನ ಪ್ರಾಚಾರ್ಯ ಅಲೆಕ್ಸ ಸೀಕ್ವೆರಾ ಮೊದಲಾದವರು ಉಪಸ್ಥಿತರಿದ್ದರು.
ಈ ಪಂದ್ಯಾಟದಲ್ಲಿ ಪ್ರಾಥಮಿಕ ಶಾಲಾ ಬಾಲಕರ ವಿಭಾಗದಲ್ಲಿ ಸೇಕ್ರೆಟ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಪ್ರಥಮ ಸ್ಥಾನವನ್ನು, ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆ ಲೈಲಾ ದ್ವಿತೀಯ ಸ್ಥಾನವನ್ನು ಪಡೆದಿದೆ. ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದಲ್ಲಿ ನವಚೇತನ ಆಂಗ್ಲ ಮಾಧ್ಯಮ ಶಾಲೆ ಕರಿಮಣೇಲು ಪ್ರಥಮ ಸ್ಥಾನವನ್ನು, ಎಸ್. ಡಿ. ಎಂ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳ ದ್ವಿತೀಯ ಸ್ಥಾನವನ್ನು ಪಡೆದಿದೆ.
ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ ಸೇಕ್ರೆಟ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಮಡಂತ್ಯಾರು ಪ್ರಥಮ ಸ್ಥಾನವನ್ನು, ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ ಉಜಿರೆ ದ್ವಿತೀಯ ಸ್ಥಾನವನ್ನು ಪಡೆದಿದೆ. ಪ್ರೌಢಶಾಲಾ ಬಾಲಕಿಯರ ವಿಭಾಗದಲ್ಲಿ ಎಸ್ .ಡಿ. ಎಂ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳ ಪ್ರಥಮ ಸ್ಥಾನವನ್ನು, ನವಚೇತನ ಆಂಗ್ಲಮಾಧ್ಯಮ ಶಾಲೆ ಕರಿಮಣೇಲು ದ್ವಿತೀಯ ಸ್ಥಾನವನ್ನು ಪಡೆದಿದೆ. ಗೇರುಕಟ್ಟೆಯ ಸರಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಕ ಅಜಿತ್ ಕುಮಾರ್ ಕೊಕ್ರಾಡಿ ಸ್ವಾಗತಿಸಿದರು. ಕೊಯ್ಯೂರು ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕ ರಾಮಚಂದ್ರ ದೊಡ್ಮನಿ ಸಭಾ ಕಾರ್ಯಕ್ರಮವನ್ನು ನಿರೂಪಿಸಿದರು. ಶಾಲಾ ಸಹ ಶಿಕ್ಷಕಿ ಮಮತಾ ವಂದಿಸಿದರು.