
ಬಳಂಜ: ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯಿಂದ ಬಳಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬ್ಯಾಂಡ್ ಸೆಟ್ ಗೆ ಬೇಕಾದ ದಂಡನಾಯಕನ ದಂಡ ಹಾಗೂ ಕೊಳಲು ಹಸ್ತಾಂತರವನ್ನು ಆ. 9 ರಂದು ಮಾಡಲಾಯಿತು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರತ್ನಾಕರ ಪೂಜಾರಿ, ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಪ್ರಧಾನ ಸಂಚಾಲಕ ಹರೀಶ್ ವೈ. ಚಂದ್ರಮ, ಮಂಡಳಿಯ ತರಬೇತುದಾರೆ ಮಾನ್ಯ, ಶಾಲಾ ಮುಖ್ಯೋಪಾಧ್ಯಾಯ ರಂಗಸ್ವಾಮಿ, ಜ್ಯೋತಿ ಮಹಿಳಾ ಮಂಡಳಿ ಅಧ್ಯಕ್ಷರು ಹಾಗೂ ಶಾಲಾಭಿವೃದ್ಧಿ ಸಮಿತಿಯ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.