ಬೆಳ್ತಂಗಡಿ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ ಹಾಗೂ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳ ಇದರ ಸಹಯೋಗದೊಂದಿಗೆ ಜರುಗಿದ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದ ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನವನ್ನು ಪಡೆದಿರುತ್ತಾರೆ.
ಪ್ರಾಥಮಿಕ ವಿಭಾಗದಲ್ಲಿ ಜಶ್ವಿತ್, ವಿಕ್ರಂ, ಸಿದ್ದಾಂತ ಇವರನ್ನೊಳಗೊಂಡ ಬಾಲಕರ ತಂಡವು ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿರುತ್ತದೆ.
ಹಾಗೆಯೇ ಜಶ್ವಿತ್ ಉತ್ತಮ ಆಟಗಾರನಾಗಿ ಹೊರಹೊಮ್ಮಿರುತ್ತಾರೆ. ಹಾಗೂ ಶ್ರೀಯಾ, ಸನ್ನಿಧಿ, ಶ್ರಾವಣಿ, ಅನಘ ಮತ್ತು ಅನನ್ಯ ಇವರನ್ನೊಳಗೊಂಡ ಬಾಲಕಿಯರ ತಂಡವು ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿರುತ್ತದೆ. ಶ್ರೀಯ ಉತ್ತಮ ಆಟಗಾರ್ತಿಯಾಗಿ ಹೊರಹೊಮ್ಮಿರುತ್ತಾರೆ.
ಪ್ರೌಢಶಾಲಾ ವಿಭಾಗದಲ್ಲಿ ಧೀಮಂತ್, ಆದರ್ಶ್ ಹೆಚ್ ವೈ ಹಿತೇಶ್ ಇವರನ್ನು ಒಳಗೊಂಡ ತಂಡವು ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ಧೀಮಂತ್ ಉತ್ತಮ ಆಟಗಾರನಾಗಿ ಹೊರಹೊಮ್ಮಿರುತ್ತಾರೆ.
ಆದ್ಯ ರೈ, ದೃಶಾ ಮರಿಯಾ, ಧನ್ಯಶ್ರೀ, ಕ್ಷಮಾ, ಕಲ್ಪಿತ ಇವರನ್ನು ಒಳಗೊಂಡ ಬಾಲಕಿಯರ ತಂಡವು ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಆದ್ಯ ರೈ ಉತ್ತಮ ಆಟಗಾರರಾಗಿ ಹೊರಹೊಮ್ಮಿ ಇರುತ್ತಾರೆ. ಇವರಿಗೆ ದೈಹಿಕ ಶಿಕ್ಷಕ ಸಂತೋಷ್ ಕುಮಾರ್ ಅವರು ಮಾರ್ಗದರ್ಶನವನ್ನು ನೀಡಿರುತ್ತಾರೆ.