ಧರ್ಮಸ್ಥಳ: ಆ. 6ರಂದು ಪಾಂಗಳ ಕ್ರಾಸ್‌ನಲ್ಲಿ ಯೂಟ್ಯೂಬರ್‌ಗಳ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಅ.ಕ್ರ: 46/25ರಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿಯುತ್ತಿದೆ.
ಇದೀಗ, ಅದೇ ದಿನ ಘಟನಾ ಸ್ಥಳದಲ್ಲಿದ್ದ ಕಡಬ ಇಚ್ಚಿಲಂಪಾಡಿ ನಿವಾಸಿ ಜಯಂತ್ ಟಿ. ಅವರ ಮೇಲೂ ಕೆಲವು ಕಿಡಿಗೇಡಿಗಳು ಹಲ್ಲೆ ನಡೆಸಿ, ಕೊಲೆ ಯತ್ನ ಮಾಡಿರುವ ಬಗ್ಗೆ ಜಯಂತ್ ಟಿ ಅವರು ಆ.11ರಂದು ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪೊಲೀಸರು ಪ್ರಕರಣವನ್ನು ಪರಿಶೀಲಿಸಿ, ಮುಂದಿನ ಕಾನೂನು ಕ್ರಮ ಕೈಗೊಳ್ಳುವ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ.