ಶಿರ್ಲಾಲು: ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಹಾಗೂ ಯುವ ಬಿಲ್ಲವ ವೇದಿಕೆ ಬಿಲ್ಲವ ಮಹಿಳಾ ವೇದಿಕೆ ಯುವ ವಾಹಿನಿ ಸಂಚಲನ ಸಮಿತಿ ಶಿರ್ಲಾಲು ಕರಂಬಾರು ಇದರ ನೇತೃತ್ವದಲ್ಲಿ ಆಟಿದ ಅಟಿಲ್ ಕಾರ್ಯಕ್ರಮವು ಶಿರ್ಲಾಲು ಸಿ.ಎ. ಬ್ಯಾಂಕ್ ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಸಂಘದ ಅಧ್ಯಕ್ಷ ಸದಾಶಿವ ಪೂಜಾರಿ ಊರ ಉದ್ಘಾಟಿಸಿ ಕಾರ್ಯಕ್ರಮದ ಬಗ್ಗೆ ಹಾಗೂ ಸಂಘದ ಮುಂದಿನ ಸೇವಾ ಚಟುವಟಿಕೆಗಳ ಬಗ್ಗೆ ತಿಳಿಸಿ ಎಲ್ಲರ ಸಹಕಾರ ಕೇಳಿದರು.
ಯುವ ಬಿಲ್ಲವ ವೇದಿಕೆ ಬೆಳ್ತಂಗಡಿ ತಾಲೂಕು ಅಧ್ಯಕ್ಷ ಎಂ.ಕೆ. ಪ್ರಸಾದ್ ಮಾತನಾಡಿ ಆಟಿಯ ಸಂಪ್ರದಾಯ ಆಚರಣೆಗಳನ್ನು ತಿಳಿಸಿದರು.
ವೇದಿಕೆಯಲ್ಲಿ ಶಿರ್ಲಾಲು ಯುವ ಬಿಲ್ಲವ ವೇದಿಕೆಯ ಅಧ್ಯಕ್ಷ ಜ್ಞಾನೇಶ್ ಪೂಜಾರಿ ಕಟ್ಟ, ಯುವವಾಹಿನಿ ಸಂಚಲನ ಸಮಿತಿ ಶಿರ್ಲಾಲು ಅಧ್ಯಕ್ಷ ಶಶಿಕಾಂತ್ ಪೊಯ್ಯೇದಂಡ, ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಶೋಭಾ ಗೋಣಗುರಿ ಉಪಸ್ಥಿತರಿದ್ದರು.
ಈ ಕಾರ್ಯಕ್ರಮದಲ್ಲಿ ಸ್ವಜಾತಿ ಬಾಂಧವರು ತಮ್ಮ ಮನೆಯಲ್ಲಿ ಅಟಿಯ ತಿಂಗಳಲ್ಲಿ ಮಾಡುವ ಸುಮಾರು 60 ವಿವಿಧ ಬಗೆಯ ತಿಂಡಿ ತಿನಸುಗಳನ್ನು ತಯಾರಿ ತಂದಿದ್ದರು. ಕಾರ್ಯಕ್ರಮದಲ್ಲಿ ವಿಶೇಷವಾಗಿ ಮನರಂಜನೆಗಾಗಿ ವಿವಿಧ ಸ್ಪರ್ಧೆಗಳನ್ನು ಏರ್ಪಾಡು ಮಾಡಲಾಯಿತು. ಸ್ಪರ್ಧೆಯಲ್ಲಿ ವಿಜೇತರಾದ ಸ್ಪರ್ಧಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ಆಟೋಟ ಸ್ಪರ್ಧೆಯನ್ನು ಸಂಘದ ನಿಕಟ ಪೂರ್ವ ಅಧ್ಯಕ್ಷ ಪ್ರವೀಣ್ ಕೋಟ್ಯಾನ್ ಪಾಲನೆ ನೆರವೇರಿಸಿದರು. ಸಾಮೂಹಿಕ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮವನ್ನು ಸಂಘದ ಪ್ರಧಾನ ಕಾರ್ಯದರ್ಶಿ ದಿನೇಶ್ ಕರ್ದೋಟ್ಟು ಸ್ವಾಗತಿಸಿದರು. ಹರೀಶ್ ಕಲ್ಲಾಜೆ ಕಾರ್ಯಕ್ರಮ ನಿರೂಪಿಸಿದರು. ಸಂಘದ ಪದಾಧಿಕಾರಿಗಳು ಸಹಕಾರ ನೀಡಿದರು. ಮಹಿಳಾ ಬಿಲ್ಲವ ವೇದಿಕೆಯ ಕಾರ್ಯದರ್ಶಿ ರೇಖಾ ನೇತ್ರಾಬೈಲ್ ಧನ್ಯವಾದವಿತ್ತರು.