
ಮಡಂತ್ಯಾರು: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ, ಮಡಂತ್ಯಾರು ಬಂಟರ ಮಹಿಳಾ ಸಮಿತಿಯ ಆಶ್ರಯದಲ್ಲಿ “ಆಟಿಡೊಂಜಿ ಕೂಟ” ಕಾರ್ಯಕ್ರಮ ಆ.10ರಂದು ಪಾರೆಂಕಿ ಮಹಿಷಮರ್ಧಿನಿ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಮೂಡಯೂರು ಶಾರದಾ ಮತ್ತು ವಿಠಲ್ ಶೆಟ್ಟಿ ದಂಪತಿಗಳು ದೀಪ ಬೆಳಗಿಸಿ ಉದ್ಘಾಟಿಸಿದರು. ಮಡಂತ್ಯಾರು ವಲಯ ಬಂಟರ ಮಹಿಳಾ ಸಮಿತಿಯ ಅಧ್ಯಕ್ಷೆ ದಿವ್ಯ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ವಿಂಧ್ಯಾ ಎಸ್. ರೈ ಮಾತನಾಡಿ ಆಟಿ ತಿಂಗಳಲ್ಲಿ ಸಂಘಟನೆಗಳು ಇಂತಹ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದರ ಮೂಲಕ ಸಂಸ್ಕೃತಿ ಆಚಾರ ವಿಚಾರ ಪರಂಪರೆಯನ್ನು ಮುಂದುವರಿಸಿಕೊಂಡು ಬರೋಣ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಗೌರವ ಉಪಸ್ಥಿತಿಯಾಗಿ ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷ ಜಯಂತ್ ಶೆಟ್ಟಿ ಭಂಡಾರಿಗುಡ್ಡೆ, ಮಡಂತ್ಯಾರು ವಲಯ ಬಂಟರ ಸಂಘದ ಅಧ್ಯಕ್ಷ ಕೆ. ದಿವಾಕರ ಶೆಟ್ಟಿ ಕಂಗಿತ್ತಿಲು, ಬೆಳ್ತಂಗಡಿ ಮಹಿಳಾ ಬಂಟರ ಸಂಘದ ಅಧ್ಯಕ್ಷೆ ಜಯಲಕ್ಷ್ಮಿ ಎಸ್. ಸಾಮಾನಿ, ಬಂಟರ ಯಾನೆ ನಾಡವರ ಮಾತೃ ಸಂಘದ ಸಂಚಾಲಕ ಎಂ. ಜಯರಾಮ ಭಂಡಾರಿ ಧರ್ಮಸ್ಥಳ, ನಳಿನಿ ಎಂ. ಪೂಂಜಾ ಮಿಥಿಲಾ ಗರ್ಡಾಡಿ, ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಪೂರ್ವಾಧ್ಯಕ್ಷ ಜಯರಾಮ ಶೆಟ್ಟಿ ಮುಂಡಾಡಿ ಗುತ್ತು, ಲಕ್ಷ್ಮಿ ಸಂಜೀವ ಶೆಟ್ಟಿ ಮುಗೆರೋಡಿ, ಮಚ್ಚಿನ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಪದ್ಮಾವತಿ ಆರ್ ಶೆಟ್ಟಿ ನೆತ್ತರ, ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಸಂಘಟನಾ ಸಂಚಾಲಕ ರಘುರಾಮ್ ಶೆಟ್ಟಿ ಸಾಧನಾ ಉಜಿರೆ, ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಸಂಚಾಲಕ ಸುರೇಶ್ ಶೆಟ್ಟಿ ಬೊಳ್ಳಾಜೆ, ಬೆಳ್ತಂಗಡಿ ಮಹಿಳಾ ಬಂಟರ ಯಾನೆ ನಾಡವರ ಸಂಘದ ಉಪಾಧ್ಯಕ್ಷೆ ಸಂಗೀತಾ ಅರುಣ್ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮಡಂತ್ಯಾರು ವಲಯ ಸಮಿತಿಯ ಸದಸ್ಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಸುಮಾರು 54 ಬಗೆಯ ಆಟಿ ತಿಂಗಳ ವಿವಿಧ ಖಾದ್ಯಗಳೊoದಿಗೆ ಭೋಜನ ವಿಶೇಷವಾಗಿತ್ತು.ರೇಖಾ ಶೆಟ್ಟಿ ಸ್ವಾಗತಿಸಿದರು. ಶಮಿತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ರಮ್ಯಾ ಶೆಟ್ಟಿ ಧನ್ಯವಾದ ನೀಡಿದರು.
ವರದಿ: ಮನು ಮದ್ದಡ್ಕ
,