ಉಜಿರೆ: ಆ. 13ರಂದು ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ನಮ್ಮ ದೇಶದ ರಾಷ್ಟ್ರಧ್ವಜದ ಕುರಿತು ಜಾಗೃತಿ ಮೂಡಿಸುವ ಅಂಗವಾಗಿ “ರಾಷ್ಟ್ರಧ್ವಜದ ಮಾಹಿತಿ” ಕಾರ್ಯಕ್ರಮ ಆಯೋಜಿಸಲಾಗಿತ್ತು.
ಸಂಪನ್ಮೂಲ ವ್ಯಕ್ತಿಯಾಗಿ ಹಿಂದೂ ಜನಜಾಗೃತಿ ಸಮಿತಿಯ ಸದಸ್ಯರಾದ ಶಾರದ ಹಾಗೂ ಹರೀಶ್ ರಾಷ್ಟ್ರಧ್ವಜದ ಗೌರವ ಕಾಪಾಡುವ ಜವಾಬ್ದಾರಿ ಹಾಗೂ ವಿಷಯದ ಕುರಿತಾಗಿ ಮಾಹಿತಿ ಹಂಚಿಕೊಂಡರು.
ವೇದಿಕೆಯಲ್ಲಿ ಶಾಲಾ ಹಿರಿಯ ಶಿಕ್ಷಕಿ ಶಾಂಟಿ ಜಾರ್ಜ್ ಉಪಸ್ಥಿತರಿದ್ದರು. ಶಿಕ್ಷಕಿ ಸವಿತಾ ವೇದಪ್ರಕಾಶ್ ಕಾರ್ಯಕ್ರಮ ನಿರೂಪಿಸಿದರು.