
ಅಳದಂಗಡಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ ಮತ್ತು ಸೈಂಟ್ ಪೀಟರ್ ಕ್ಲೇವರ್ ಆಂಗ್ಲ ಮಾಧ್ಯಮ ಶಾಲೆ ಅಳದಂಗಡಿ ಇವರ ಜಂಟಿ ಆಶ್ರಯದಲ್ಲಿ ನಾರಾವಿ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟ ಆ.13ರಂದು ಸೈಂಟ್ ಪೀಟರ್ ಕ್ಲೇವರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು.
ಈ ಪಂದ್ಯಾಟದ ಉದ್ಘಾಟನೆಯನ್ನು ಸಂಚಾಲಕ ಫಾ. ಎಲಿಯಾಸ್ ಡಿಸೋಜ, ವಲಯ ಮಟ್ಟದ ಕ್ರೀಡಾ ಮೇಲ್ವಿಚಾರಕ ರಾಜೇಂದ್ರ ಬಲ್ಲಾಳ, ಮುಖ್ಯ ಶಿಕ್ಷಕಿ ಮೋನಿಕಾ ಡಿಸೋಜ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ರಿಯಾಝ್, ಶಿಕ್ಷಕರಕ್ಷಕ ಸಂಘದ ಉಪಾಧ್ಯಕ್ಷ ಸ್ಟೀವನ್ ಮ್ಯಾಥ್ಯೂ ಪಾಯ್ಸ್, ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಲಿಯೋ ಪಿರೇರಾ ಹಾಗೂ ವೇದಿಕೆಯಲ್ಲಿದ್ದ ಇತರ ಗಣ್ಯರು ಸೇರಿ ನೆರವೇರಿಸಿದರು.
ಶಾಲೆಯ ಸಂಚಾಲಕ ಫಾ. ಎಲಿಯಾಸ್ ಡಿಸೋಜ ಹಾಗೂ ರಾಜೇಂದ್ರ ಬಲ್ಲಾಳ್ ಅವರು ಕ್ರೀಡಾಪಟುಗಳಿಗೆ ಶುಭ ಹಾರೈಸಿದರು. ಶಾಲೆಯ ಶಿಕ್ಷಕ-ರಕ್ಷಕ ಹಾಗೂ ಶಾಲಾ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು. ಪಂದ್ಯಾಟಕ್ಕೆ ಬಂದ ಅಥಿತಿ ಗಣ್ಯರನ್ನು ಮುಖ್ಯ ಶಿಕ್ಷಕಿ ಮೋನಿಕಾ ಡಿಸೋಜಾ ಅವರು ಸ್ವಾಗತಿಸಿದರು. ಸಹ ಶಿಕ್ಷಕಿ ರಾಜೇಶ್ವರಿ ಕಾರ್ಯಕ್ರಮ ನಿರೂಪಿಸಿದರು. ಸಹ ಶಿಕ್ಷಕಿ ಸುಜಾತ ವಂದಿಸಿದರು.