
ವೇಣೂರು: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ ಸಂಘದ ವಠಾರದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಸುಂದರ ಹೆಗ್ಡೆ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯೋತ್ಸವದ ಮಹತ್ವವನ್ನು ತಿಳಿಸಿದರು. ಸಂಘದ ಉಪಾಧ್ಯಕ್ಷ ರತ್ನಾಕರ ಬಿ., ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಂತ್ ಪೂಜಾರಿ, ಸಂಘದ ನಿರ್ದೇಶಕರು ಹಾಗೂ ಸಂಘದ ಸಿಬ್ಬಂದಿಗಳು ಉಪಸ್ಥಿತರಿದ್ದರು.