
ಉಜಿರೆ : ಅನುಗ್ರಹ ಶಿಕ್ಷಣ ಸಂಸ್ಥೆಗಳಲ್ಲಿ 79ನೇ ಸ್ವಾತಂತ್ರ್ಯವವು ಶಾಲಾ ಸಂಚಾಲಕರಾದ ಫಾ! ಅಬೆಲ್ ಲೋಬೋ ಅವರ ಅಧ್ಯಕ್ಷತೆಯಲ್ಲಿ ಜರಗಿತು. ಬೆಳ್ತಂಗಡಿ ಸುದ್ದಿ ಬಿಡುಗಡೆಯ ಹಿರಿಯ ವರದಿಗಾರ ಹೆರಾಲ್ಡ್ ಪಿಂಟೊರವರು ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯೋತ್ಸವದ ಶುಭ ಸಂದೇಶವನ್ನು ನೀಡಿದರು.
ವಿದ್ಯಾರ್ಥಿಗಳು ಶಾಲಾ ಜೀವನದಲ್ಲಿ ದೇಶ ಪ್ರೇಮವನ್ನು ಬೆಳೆಸಿಕೊಳ್ಳಲು ಕರೆಯಿತ್ತರು. ಸಮಾರಂಭದಲ್ಲಿ ಶಾಲಾ ಪ್ರಾಂಶುಪಾಲ ಫಾ! ವಿಜಯ್ ಲೋಬೊ, ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷ ಆ್ಯಂಟನಿ ಫೆರ್ನಾಂಡೀಸ್, ಕಾರ್ಯದರ್ಶಿ ಲಿಗೋರಿ ವಾಸ್, ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷ ಗುರುರಾಜ್ ಶಬರಾಯ, ಆಡಳಿತ ಮಂಡಳಿ ಸದಸ್ಯರು ಹಾಗೂ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

ಪತ್ರಿಕೋದ್ಯಮ ಕ್ಷೇತ್ರದಲ್ಲಿ ಅಪಾರ ಸೇವೆಯನ್ನಿತ ಹೆರಾಲ್ಡ್ ಪಿಂಟೊ ಹಾಗೂ ಇತ್ತಿಚೆಗೆ ಶಿವಮೊಗ್ಗದಲ್ಲಿ ನಡೆದ 6ನೇ ಅಂತರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್ -2025 ರಲ್ಲಿ ಪ್ರಥಮ ಸ್ಥಾನ ಪಡೆದು ಎರಡು ಚಿನ್ನದ ಪದಕ ಗಳಿಸಿದ ವಿದ್ಯಾರ್ಥಿ ಮೊಹಮ್ಮದ್ ರಯ್ಯಾನ್ ರವರನ್ನು ಸನ್ಮಾನಿಸಲಾಯಿತು. ಸಭಾಕಾರ್ಯಕ್ರಮದ ಬಳಿಕ ಮಕ್ಕಳಿಂದ ರಾಷ್ಟ್ರ ಭಕ್ತಿ ಬಿಂಬಿಸುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು. ಸಹಶಿಕ್ಷಕರಾದ ಶ್ರೀ ಗಣೇಶ್ ರವರು ನಿರೂಪಿಸಿ ವಂದಿಸಿದರು. ಮಕ್ಕಳಿಗೆ ಸಿಹಿತಿಂಡಿ ಹಂಚಲಾಯಿತು.