ವಾಣಿ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

0

ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪಿ. ಕುಶಾಲಪ್ಪ ಗೌಡ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯೋತ್ಸವದ ಶುಭಾಶಯಗಳನ್ನು ಕೋರಿದರು. ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ, ಆಡಳಿತ ಅಧಿಕಾರಿ ಪ್ರಸಾದ್ ಕುಮಾರ್, ವಾಣಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯನಿ ಸುಹಾಸಿನಿ ಉಪಸ್ಥಿತರಿದ್ದರು.
ವಾಣಿ ಶಿಕ್ಷಣ ಸಂಸ್ಥೆಯ ಉಪನ್ಯಾಸಕರು, ಶಿಕ್ಷಕರು, ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ. ಸ್ವಾಗತಿಸಿದರು. ಉಪನ್ಯಾಸಕ ಬೆಳಿಯಪ್ಪ ಕೆ. ನಿರೂಪಿಸಿದರು. ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಯ ಲಕ್ಷ್ಮೀನಾರಾಯಣ ಕೆ. ಧನ್ಯವಾದವಿತ್ತರು.

LEAVE A REPLY

Please enter your comment!
Please enter your name here