ಕಕ್ಯಪದವು: ಎಲ್.ಸಿ.ಆರ್ ವಿದ್ಯಾ ಸಂಸ್ಥೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

0

ಕಕ್ಯಪದವು: ಎಲ್.ಸಿ.ಆರ್ ವಿದ್ಯಾ ಸಂಸ್ಥೆಯಲ್ಲಿ 79ನೆಯ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲ ಜೋಸ್ಟನ್ ಲೋಬೋ ಧ್ವಜಾರೋಹಣವನ್ನು ನೆರವೇರಿಸಿದರು.
ಕಾಲೇಜು ವಿಭಾಗ ಹಾಗೂ ಪ್ರೌಢ ವಿಭಾಗದ ವಿದ್ಯಾರ್ಥಿಗಳು ಸ್ವಾತಂತ್ರ್ಯ ದಿನಾಚರಣೆಯ ಕುರಿತು ಭಾಷಣವನ್ನು ಮಾಡಿದರು.
ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದ್ದು, ಸ್ಪರ್ಧೆಯಲ್ಲಿ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಪ್ರಾಥಮಿಕ ವಿಭಾಗದ ಸಹಶಿಕ್ಷಕಿ ಸೌಮ್ಯ ಬಿ.ಆರ್ ಬಹುಮಾನ ವಿತರಣೆಯ ವರದಿಯನ್ನು ಓದಿದರು. ಈ ಕಾರ್ಯಕ್ರಮವನ್ನು ಸಂಸ್ಥೆಯ ಪ್ರಾಂಶುಪಾಲ ಜೋಸ್ಟನ್ ಲೋಬೊ ,
ಸಂಯೋಜಕ ಯಶವಂತ್ ಜಿ. ನಾಯಕ್ ಹಾಗೂ ಮುಖ್ಯ ಶಿಕ್ಷಕಿ ವಿಜಯ ಕೆ. ಇವರು ನೆರವೇರಿಸಿಕೊಟ್ಟರು.

ಸಂಸ್ಥೆಯ ದೈಹಿಕ ಶಿಕ್ಷಕಿ ಹರಿಣಾಕ್ಷಿ ಜಿ.ಕೆ. ಘೋಷವಾಕ್ಯ ಹೇಳುವುದರ ಮೂಲಕ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿದರು.
ವಿದ್ಯಾರ್ಥಿಗಳು ಹಾಗೂ ನೆರೆದಿದ್ದ ಎಲ್ಲರಿಗೂ ಸಿಹಿ ತಿಂಡಿ ಹಂಚಲಾಯಿತು.ಬೋಧಕ, ಬೋಧಕೇತರ ವರ್ಗದವರು ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಪ್ರಾಥಮಿಕ ವಿಭಾಗದ ಸಹ ಶಿಕ್ಷಕಿ ದಿವ್ಯ ಕೆ ಸ್ವಾಗತಿಸಿದರು. ಪ್ರೌಢ ವಿಭಾಗದ ಸಹಶಿಕ್ಷಕಿ ತೀರ್ಥ ಲತಾ ನಿರೂಪಿಸಿ ವಂದಿಸಿದರು.

LEAVE A REPLY

Please enter your comment!
Please enter your name here