
ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಧ್ವಜಾರೋಹಣವನ್ನು ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ರಾಜೇಶ್ ಕುರ್ಕಿಲ ಅವರು ನೆರವೇರಿಸಿ ಶುಭಹಾರೈಸಿದರು. ಬಳಿಕ ಬೆಳಾಲು ಪೇಟೆಯಲ್ಲಿ ವಿದ್ಯಾರ್ಥಿಗಳು ಸ್ವಾತಂತ್ರ್ಯೋತ್ಸವದ ಜಯ ಘೋಷವನ್ನು ಹಾಕುತ್ತ ಮೆರವಣಿಗೆಯಲ್ಲಿ ಸಾಗಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯ ಜಯರಾಮ ಮಯ್ಯ ಸ್ವಾತಂತ್ರ್ಯದ ಸವಾಲು ಮತ್ತು ಅದನ್ನು ಉಳಿಸಿ ಬೆಳೆಸಬೇಕಾದ ಅಗತ್ಯತೆಯ ಬಗೆಗೆ ಸಂದೇಶ ನೀಡಿದರು. ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಏರ್ಪಡಿಸಲಾದ ಸ್ಪರ್ಧೆಗಳ ವಿಜೇತರ ಪಟ್ಟಿಯನ್ನು ಶಿಕ್ಷಕ ಕಿರಣ್ ವಾಚಿಸಿದರು. ವಿದ್ಯಾರ್ಥಿನಿ ತ್ರಿಶಾ ಜೈನ್ ದೇಶಭಕ್ತಿ ಗೀತೆಯನ್ನು ಹಾಡಿದರು. ಸ್ವಾತಂತ್ರ್ಯೋತ್ಸವ ಮತ್ತು ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿದ್ಯಾರ್ಥಿಗಳು ರಚಿಸಿದ ಭಿತ್ತಿ ಪತ್ರಿಕೆಯನ್ನು ಅನಾವರಣಗೊಳಿಸಲಾಯಿತು. ಶಿಕ್ಷಕ ಸುಮನ್ ಯು.ಎಸ್. ಕಾರ್ಯಕ್ರಮ ನಿರೂಪಿಸಿದರು.