
ಧರ್ಮಸ್ಥಳ: ಗ್ರಾಮದ ನಾರ್ಯ ಅಂಗನವಾಡಿಯಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಣೆ ಸಂಭ್ರಮದಿಂದ ನಡೆಯಿತು.
ನಾರ್ಯ ಶ್ರೀ ಸಿದ್ದಿವಿನಾಯಕ ಸ್ತ್ರೀ ಶಕ್ತಿ ಸಂಘದ ಅಧ್ಯಕ್ಷೆ ಮೋಹಿನಿ ಇಪ್ಪ ಧ್ವಜಾರೋಹಣ ನೆರವೇರಿಸಿದರು.
ಗ್ರಾಮ ಪಂಚಾಯತ್ ಸದಸ್ಯೆ ರೇವತಿ, ಅಂಗನವಾಡಿ ಸಲಹಾ ಸಮಿತಿ ಅಧ್ಯಕ್ಷೆ ಗಾಯತ್ರಿ, ಸಲಹಾ ಸಮಿತಿ ಸದಸ್ಯರು, ಸ್ತ್ರೀ ಶಕ್ತಿ ಸಂಘದ ಸದಸ್ಯೆಯರು, ಅಂಗನವಾಡಿ ಮಕ್ಕಳ ಪೋಷಕರು, ಊರವರು ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ಜಾನಕಿ ಸ್ವಾಗತಿಸಿದರು. ಸ್ತ್ರೀ ಶಕ್ತಿ ಸಂಘದ ಸದಸ್ಯೆ ಸುಗುಣ ಧನ್ಯವಾದವಿತ್ತರು.