
ಬೆಳ್ತಂಗಡಿ: ಇಲ್ಲಿನ ಶ್ರೀ ಗುರುದೇವ ಎಜುಕೇಶನಲ್ ಟ್ರಸ್ಟ್ ಆಡಳಿತಕ್ಕೊಳಪಟ್ಟ ಶ್ರೀ ಗುರುದೇವ ಕಾಲೇಜಿನಲ್ಲಿ 79 ನೇ ಸ್ವಾತಂತ್ರೋತ್ಸವದ ಧ್ವಜಾರೋಹಣವನ್ನು ನಿವೃತ್ತ ಮುಖ್ಯ ಶಿಕ್ಷಕಿ ಜ್ಯೋತಿ ಎನ್.ಎಸ್.ನೆರವೇರಿಸಿದರು.
ಬಳಿಕ ನಡೆದ ಸಮಾರಂಭದಲ್ಲಿ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದ ಅವರು , ‘ ಭವ್ಯ ಭಾರತದಲ್ಲಿ ಬದುಕುವುದೇ ನಮ್ಮೆಲ್ಲರ ಪಾಲಿನ ಸೌಭಾಗ್ಯ. ನಮ್ಮ ಪಾರಂಪರಿಕ ಸಂಸ್ಕೃತಿ, ಭಾಷಾ ವೈವಿಧ್ಯತೆಯ ಮಧ್ಯೆ ಶಿಕ್ಷಣ ಹಾಗೂ ಆರ್ಥಿಕತೆಯಲ್ಲಿ ಈ ದೇಶವನ್ನು ಸಂಪದ್ಭರಿತವಾಗಿ ಕಟ್ಟುವ ಕಾರ್ಯದಲ್ಲಿ ಎಲ್ಲರೂ ಶಕ್ತಿ ಮೀರಿ ಪಣ ತೊಡಬೇಕು ‘ ಎಂದರು.
ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ.ಸವಿತಾ ವಹಿಸಿದ್ದರು
ನಿವೃತ್ತ ಶಿಕ್ಷಕ ಸುರೇಶ್, ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸುಕೇಶ್ ಕುಮಾರ್, ವಿದ್ಯಾರ್ಥಿಗಳಾದ ತೃತೀಯ ಬಿ. ಎ. ವಿದ್ಯಾರ್ಥಿನಿ ಚಂದನಾ, ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಖುಷಿ, ವಿಜ್ಞಾನ ವಿಭಾಗದ ವಿದ್ಯಾರ್ಥಿ ದೀಪಕ್ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ನಡೆದ ವಿವಿಧ ಸ್ಪರ್ಧೆಗಳ ಬಹುಮಾನ ವಿತರಣೆ ನಡೆಯಿತು
ಉಪ ಪ್ರಾಂಶುಪಾಲ ಬಿ. ಎ. ಶಮೀವುಲ್ಲಾ ಸ್ವಾಗತಿಸಿದರು. ಕನ್ನಡ ವಿಭಾಗದ ಉಪನ್ಯಾಸಕ ಗಣೇಶ್ ಬಿ. ಶಿರ್ಲಾಲು ಪರಿಚಯಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಸೌಮ್ಯ, ಇತಿಹಾಸ ವಿಭಾಗದ ಉಪನ್ಯಾಸಕ ಹರೀಶ್ ಪೂಜಾರಿ ಬಹುಮಾನಿತರ ಪಟ್ಟಿ ವಾಚಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಸುಷ್ಮಾ ಹಾಗೂ ರಸಾಯನಶಾಸ್ತ್ರ ವಿಭಾಗದ ಉಪನ್ಯಾಸಕಿ ಸೌಜನ್ಯ ಕಾರ್ಯಕ್ರಮ ನಿರೂಪಿಸಿದರು. ಕನ್ನಡ ವಿಭಾಗದ ಉಪನ್ಯಾಸಕ ಸತೀಶ್ ಸಿ. ವಂದಿಸಿದರು.