ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಬೆಳ್ತಂಗಡಿ: ಆ .15ರಂದು ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ವಿಜೃಂಭಣೆಯಿಂದ ಆಚರಿಸಲಾಯಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಗೌರವಾನ್ವಿತ ಸುಬೇದಾರ್ ಮೇಜರ್ ಮೆಲ್ವಿನ್ ಫೆರ್ನಾಂಡಿಸ್ ಅವರು ಧ್ವಜಾರೋಹಣ ನೆರವೇರಿಸಿದರು.

ರಾಷ್ಟ್ರಗೀತೆ, ಧ್ವಜಗೀತೆಯ ನಂತರ ಶಾಲಾ ನಾಲ್ಕು ತಂಡದ ವಿದ್ಯಾರ್ಥಿಗಳು ಪಥಸಂಚನದ ಮೂಲಕ ರಾಷ್ಟ್ರಧ್ವಜಕ್ಕೆ ಗೌರವವನ್ನು ಸಲ್ಲಿಸಿದರು. ಮುಖ್ಯ ಅತಿಥಿಯಾದ ಸುಬೇದಾರ್ ಮೇಜರ್ ಮೆಲ್ವಿನ್ ಫೆರ್ನಾಂಡಿಸ್ ಅವರು ಸ್ವಾತಂತ್ರ್ಯ ಹೋರಾಟಗಾರರ ಹೋರಾಟವನ್ನು ಮತ್ತು ಸೈನಿಕರ ತ್ಯಾಗವನ್ನು ಸ್ಮರಿಸಿದರು.

ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಪ್ರೀತಿ ಜಾರ್ಜ್ ಅವರು ಸ್ವಾತಂತ್ರ್ಯ ದಿನಾಚರಣೆಯ ಮಹತ್ವವನ್ನು ಮಕ್ಕಳಿಗೆ ಸಾರಿದರು. ವಲಯ ಮಟ್ಟ ಮತ್ತು ತಾಲೂಕು ಮಟ್ಟದಲ್ಲಿ ನಡೆದ ಪಂದ್ಯಾಟದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು.

ವಿದ್ಯಾರ್ಥಿಗಳ ಪ್ರತಿಭೆಯನ್ನು ಪ್ರದರ್ಶಿಸುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಶಾಲಾ ಸಂಚಾಲಕಿ ಸಿಸ್ಟರ್ ಎಲ್ಸಿ ಪಾಲೆಟ್, ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಪ್ರೀತಿ ಜಾರ್ಜ್, ರಕ್ಷಕ -ಶಿಕ್ಷಕ ಸಮಿತಿಯ ಅಧ್ಯಕ್ಷ ರೆಜಿ ಜಾರ್ಜ್, ಉಪಾಧ್ಯಕ್ಷೆ ಸುಮಿತ ಪೆರ್ನಾಂಡಿಸ್, ಶಾಲಾ ಸಿಬ್ಬಂದಿ ಕಾರ್ಯದರ್ಶಿ ವೀಣಾ ನಾಯಕ್, ಶಾಲಾ ವಿದ್ಯಾರ್ಥಿ ನಾಯಕಿಯಾದ ರೇಚಲ್ , ಶಿಕ್ಷಕ ರಕ್ಷಕ ಸಂಘದ ಸದಸ್ಯರು, ಪೋಷಕರು ಮತ್ತು ಎಲ್ಲಾ ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸಹಶಿಕ್ಷಕಿ ಲಾವಣ್ಯ ಅವರು ಸ್ವಾಗತಿಸಿದರು. ಶಾಲಾ ಸಹ ಶಿಕ್ಷಕಿ ಮ್ಯುರಲ್ ಡಿಸೋಜ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಸಹ ಶಿಕ್ಷಕಿ ರೀಮಾ ವಂದಿಸಿದರು.

LEAVE A REPLY

Please enter your comment!
Please enter your name here