Site icon Suddi Belthangady

ಬೆಳ್ತಂಗಡಿ: ಪಿ.ಎಂ.ಶ್ರೀ. ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ

ಬೆಳ್ತಂಗಡಿ: ದೇಶದ 79ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಪಿ.ಎಂ.ಶ್ರೀ. ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಧ್ವಜಾರೋಹಣದ ಮೂಲಕ ಆಚರಿಸಲಾಯಿತು.

ಗಡಿ ಭದ್ರತಾ ಪಡೆಯಲ್ಲಿ 21ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಕಾರ್ಗಿಲ್ ಯೋಧ ಶ್ರೀ ಲಕ್ಷ್ಮಣ.ಜಿ.ಡಿ.ಉಜಿರೆ ಅವರು ಧ್ವಜಾರೋಹಣ ನೆರವೇರಿಸಿ ಸಂದೇಶವನ್ನು ನೀಡಿದರು. ಎಸ್.ಡಿ.ಎಂ.ಸಿ.ಅಧ್ಯಕ್ಷ ಝಮೀರ್ ಸಯದಿ, ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಂಪನ್ಮೂಲ ವ್ಯಕ್ತಿ ಮೋಹನ್ ಕುಮಾರ್, ಸಿ.ಆರ್.ಪಿ.ಗಳಾದ ವಾರಿಜಾ, ಪ್ರತಿಮಾ, ಶಿಕ್ಷಕ ವೃಂದದವರು, ಎಸ್.ಡಿ.ಎಂ.ಸಿ.ಯ ಸದಸ್ಯರು, ಪೋಷಕರು ಭಾಗವಹಿಸಿದ್ದರು.

ಮಕ್ಕಳಿಂದ ದೇಶಭಕ್ತಿ ಗೀತೆ, ಸಮೂಹ ನೃತ್ಯ, ಭಾಷಣ ಕಾರ್ಯಕ್ರಮಗಳು ನಡೆದವು. ನಿವೃತ್ತ ಯೋಧರನ್ನು ಗೌರವಿಸಲಾಯಿತು. ಮುಖ್ಯಶಿಕ್ಷಕ ಸೂರ್ಯನಾರಾಯಣ ಪುತ್ತೂರಾಯರು ಎಲ್ಲರನ್ನೂ ಸ್ವಾಗತಿಸಿದರು. ಸಹ ಶಿಕ್ಷಕಿ ಚಿತ್ರಾ ಜೆ.ಕೆ. ಧನ್ಯವಾದ ಸಲ್ಲಿಸಿದರು.

Exit mobile version