
ಬೆಳ್ತಂಗಡಿ: ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯಿಂದ 79ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಆಚರಣೆ ಮಾಡಲಾಯಿತು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಧ್ವಜಾರೋಹಣ ಮಾಡಿ ಶುಭ ಹಾರೈಸಿದರು.
ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷ ಕೆ.ಎಂ. ನಾಗೇಶ್ ಕುಮಾರ್ ಗೌಡ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಉಷಾ ಅಂಚನ್, ಕಾಂಗ್ರೆಸ್ ಗ್ರಾಮೀಣ ಸೇವಾದಳದ ಅಧ್ಯಕ್ಷ ಪ್ರದೀಪ್ ಕೆ. ಸಿ., ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್ ಕುಮಾರ್, ಯುವ ಕಾಂಗ್ರೆಸ್ ಅಧ್ಯಕ್ಷ ಅಝರ್ ನಾವೂರು, ರಾಜ್ಯ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ಝೀನತ್ ಉಜಿರೆ, ಮೇಳ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷೆ ಶೋಭಾ ನಾರಾಯಣ ಗೌಡ, ತಾಲೂಕು ಕೆಡಿಪಿ ಸದಸ್ಯ ಸುನಿಲ್ ಜೈನ್, ತಾಲೂಕು ಭೂ ನ್ಯಾಯ ಮಂಡಳಿ ಸದಸ್ಯ ಇಸ್ಮಾಯಿಲ್ ಪೇರಿಂಜೆ, ಆರೋಗ್ಯ ರಕ್ಷಾ ಸಮಿತಿಯ ಸದಸ್ಯ ವೀರೇಂದ್ರ ಕುಮಾರ್ ಜೈನ್, ಆರಾಧನಾ ಸಮಿತಿಯ ಸದಸ್ಯ ಬಾಲಕೃಷ್ಣ ಭಟ್, ಪ್ರಮುಖರಾದ ಹಣ್ಣು ಪರಮಾರು ವಿಜಯ ಗೌಡ ಬೆಳಾಲು, ಶರೀಫ್ ಶಬರಬೈಲ್, ಮಹಮ್ಮದ್ ಹನೀಫ್ ಉಜಿರೆ, ಉಮೈರಾ ಬಾನು, ಕುಶಾಲಪ್ಪ ಗೌಡ ಶಿರ್ಲಾಲು, ಡಯಾನಾ ಪುದುವೆಟ್ಟು, ಸಂತೋಷ್ ಕೆ.ಸಿ. ಪುದುವೆಟ್ಟು, ಕುಶಾಲಪ್ಪ ಗೌಡ ಕಳೆಂಜ ಹಾಗೂ ಪ್ರಮುಖರು ಉಪಸ್ಥಿತರಿದ್ದರು.