
ನಾವೂರು: ಆ. 15ರಂದು 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಧ್ವಜಾರೋಹಣೆಯನ್ನು ಗ್ರಾಮ ಪಂಚಾಯತ್ ನ ಅಧ್ಯಕ್ಷೆ ಸುನಂದ ಅವರು ನೆರವೇರಿಸಿದರು. ಊರಿನ ಗಣ್ಯರಾದ ಪ್ರದೀಪ್ ಅವರು ಕಾರ್ಯಕ್ರಮದಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರರ ಬಗ್ಗೆ ಮತ್ತು ದೇಶದ ಬಗ್ಗೆ ಸವಿಸ್ತಾರವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷೆ ಮಮತಾ, ಗ್ರಾಮ ಪಂಚಾಯತ್ ನ ಸದಸ್ಯರಾದ ಗಣೇಶ ಗೌಡ, ಬಾಲಕೃಷ್ಣ, ವೇದಾವತಿ, ಶಾಂತಿ, ಎನ್. ಕೆ. ಹಸೈನಾರ್, ಹರೀಶ್ ಸಾಲಿಯಾನ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ ಜೆ., ಪ್ರೌಢ ಶಾಲೆ ಮುಖ್ಯೋಪಾಧ್ಯಾಯರು, ವಿವಿಧ ಸಂಘಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು, ತೃಪ್ತಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು, ಸಿಬ್ಬಂದಿ ವರ್ಗ, ಪಂಚಾಯಿತಿ ಸಿಬ್ಬಂದಿ ವರ್ಗದವರು ಮತ್ತು ಗ್ರಾಮಸ್ಧರು ಉಪಸ್ಧಿತರಿದ್ದರು.
ಸರಕಾರಿ ಪ್ರೌಢ ಶಾಲೆಯ ಮಕ್ಕಳು ರಾಷ್ಟ್ರ ಗೀತೆಗಳನ್ನು ಹಾಡಿದರು. ಗ್ರಾಮ ಪಂಚಾಯತ್ ನ ಸದಸ್ಯರಾದ ಗಣೇಶ್ ಗೌಡ ಅವರು ಎಲ್ಲರನ್ನು ಸ್ವಾಗತಿಸಿ, ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ ಜೆ. ಅವರು ಧನ್ಯವಾದವಿತ್ತರು.