
ಬೆಳ್ತಂಗಡಿ: ಜೈನ ಧರ್ಮದ ಹೆಣ್ಣು ಮಕ್ಕಳ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದಕ್ಕೆ ಯುವಕನೊಬ್ಬ ಜೈಲುಪಾಲಾಗಿದ್ದಾನೆ. ಧರ್ಮಸ್ಥಳ ಬುರುಡೆ ರಹಸ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಈಗ ಪರ, ವಿರೋಧ ಪೋಸ್ಟ್‌ಗಳು ಹರಿದಾಡುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಒಂದು ಪೋಸ್ಟ್‌ಗೆ ಅಜ್ಜಂಪುರ ತಾಲೂಕಿನ ಯುವಕ ಉಮೇಶ್ ಗೌಡ ಆ.2ರಂದು ಅಶ್ಲೀಲವಾಗಿ ಕಮೆಂಟ್ ಮಾಡಿದ್ದ.
ಜೈನ ಧರ್ಮದ ಹೆಣ್ಣು ಮಕ್ಕಳ ಬಗ್ಗೆ ಅತ್ಯಂತ ಕೆಟ್ಟ ಭಾಷೆಯಿಂದ ಕಾಮೆಂಟ್ ಮಾಡಿದ್ದ ಹಿನ್ನೆಲೆಯಲ್ಲಿ ಬಿಎನ್‌ಎಸ್ ಕಾಯ್ದೆ 196 (1) ಹಾಗೂ 353 (2) ಅಡಿ ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಈಗ ಉಮೇಶ್ ಗೌಡನನ್ನು ಬಂಧಿಸಿದ್ದು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.