
ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆ ಮತ್ತು ಚರ್ಚ್ ಹಿರಿಯ ಪ್ರಾಥಮಿಕ ಶಾಲೆಯ ಸಹಭಾಗಿತ್ವದಲ್ಲಿ 79ನೇ ಸ್ವಾತಂತ್ರ್ಯೋತ್ಸವವನ್ನು ವಿಜ್ರಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿ ಮಾಜಿ ಸೈನಿಕ ಶ್ರೀ ಜೋನ್ ಮಿನೇಜಸ್ ಧ್ವಜಾರೋಹಣ ನೆರವೇರಿಸಿದರು.
ಶಾಲಾ ಸಂಚಾಲಕ ಫಾ. ವಾಲ್ಟರ್ ಡಿಮೆಲ್ಲೋ ಅವರು ಸ್ವಾತಂತ್ರ್ಯೋತ್ಸವದ ಸಂದೇಶವನ್ನು ನೀಡಿ ಶುಭ ಹಾರೈಸಿದರು. ಶಾಲಾ ವಾದ್ಯ ತಂಡದ ವಿದ್ಯಾರ್ಥಿಗಳು ರಾಷ್ಟ್ರ ಧ್ವಜಕ್ಕೆ ಗೌರವ ನಮನ ಸಲ್ಲಿಸಿದರು. ವಿದ್ಯಾರ್ಥಿಗಳು ದೇಶಪ್ರೇಮವನ್ನು ಬಿಂಬಿಸುವ ಗೀತೆ ಮತ್ತು ನೃತ್ಯಗಳ ಮೂಲಕ ಎಲ್ಲರ ಮನರಂಜಿಸಿದರು. ವಿದ್ಯಾರ್ಥಿನಿ ವಿದ್ಯಾ ಸ್ವಾತಂತ್ರ್ಯೋತ್ಸವದ ಕುರಿತು ಮಾತನಾಡಿದರು. ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿ ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ವಾಲ್ಟರ್ ಮೋನಿಸ್, ಕಾರ್ಯದರ್ಶಿ ಗಿಲ್ಬರ್ಟ್ ಪಿಂಟೋ, ಚರ್ಚ್ ನ 21 ಆಯೋಗಗಳ ಸಂಯೋಜಕಿ ಪೌಲಿನ್ ರೇಗೊ, ಚರ್ಚ್ ಶಾಲಾ ಮುಖ್ಯೋಪಾಧ್ಯಾಯಿನಿ ರೆನ್ನಿ ವಾಸ್, ಉಭಯ ಶಾಲೆಗಳ ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷ ರಿಚರ್ಡ್ ಸೀಕ್ವೇರಾ ಮತ್ತು ಹಬೀಬ್, ಪೋಷಕರು ಹಾಗೂ ದೇಶಾಭಿಮಾನಿಗಳು ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯ ಫಾ. ಕ್ಲಿಫರ್ಡ್ ಪಿಂಟೋ ಅವರು ಅತಿಥಿ ಪರಿಚಯ ಮಾಡಿದರು. ವಿದ್ಯಾರ್ಥಿನಿಯರಾದ ವಿನಿಶಾ ಲಸ್ರಾದೋ ಸ್ವಾಗತಿಸಿದರು. ಮೃದುಲಾ ಕುಲಾಲ್ ಕಾರ್ಯಕ್ರಮ ನಿರ್ವಹಿಸಿದರು. ರಿಯೋನ ವಂದಿಸಿದರು.