Site icon Suddi Belthangady

ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾಪುರುಷರ ಜಯಂತಿ ಆಚರಣಾ ಸಮಿತಿಯಿಂದ ಶ್ರೀ ಕೃಷ್ಣ ಜಯಂತಿ ಆಚರಣೆ

ಬೆಳ್ತಂಗಡಿ: ತಾಲೂಕು ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾಪುರುಷರ ಜಯಂತಿ ಆಚರಣಾ ಸಮಿತಿ ಸಹಭಾಗಿತ್ವದಲ್ಲಿ ಶ್ರೀ ಕೃಷ್ಣ ಜಯಂತಿ ಆಚರಣೆ ಆ.16ರಂದು ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ನಡೆಯಿತು.

ಶಾಸಕ ಹರೀಶ್ ಪೂಂಜ ಕಾರ್ಯಕ್ರಮ ಉದ್ಘಾಟಿಸಿದರು. ಬೆಳ್ತಂಗಡಿ ಕ್ಷೇತ್ರದ ಶಿಕ್ಷಣಾಧಿಕಾರಿ ತಾರಕೇಸರಿ ಪ್ರಮುಖ ಭಾಷಣ ಮಾಡಿದರು.ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಗೊಲ್ಲ ( ಯಾದವ) ಸಮಾಜ ಸೇವಾ ಸಂಘದ ಅಧ್ಯಕ್ಷ ಹೆಚ್ ರತ್ನಾಕರ್ ರಾವ್, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ರಾಜೇಶ್ ಮತ್ತು ತಾಲೂಕು ಮಟ್ಟದ ವಿವಿದ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಭವಾನಿ ಶಂಕರ್ ಎನ್. ಸ್ವಾಗತಿಸಿದರು. ಕಂದಾಯ ಇಲಾಖೆಯ ಹೇಮಾ ಕೆ. ನಿರೂಪಿಸಿ, ವಂದಿಸಿದರು.

Exit mobile version