
ಉಜಿರೆ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ ಸಂಘದ ವಠಾರದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರು ಧ್ವಜಾರೋಹಣ ನೆರವೇರಿಸಿದರು. ಸಂಘದ ಉಪಾಧ್ಯಕ್ಷ ಶ್ರೀಧರ ಪೂಜಾರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸರಸ್ವತಿ ಸಿ. ರೈ ಸಂಘದ ನಿರ್ದೇಶಕರು ಹಾಗೂ ಸಂಘದ ಸಿಬ್ಬಂದಿಗಳು ಉಪಸ್ಥಿತರಿದ್ದರು..