
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯದಲ್ಲಿ 79ನೇ ಸ್ವಾತಂತ್ರ್ಯೋತ್ಸವ ಬಹಳ ವಿಜೃಂಭನೆಯಿಂದ ಆಚರಿಸಲಾಯಿತು.
ಮುಖ್ಯ ಅತಿಥಿಗಳಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆ ಉಜಿರೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜನಾರ್ದನ ಭಾಗವಹಿಸಿದ ಸ್ವಾತಂತ್ರ್ಯದ ಮಹತ್ವ ಹಾಗೂ ಪ್ರಸ್ತುತ ನಮ್ಮ ದೇಶವನ್ನು ಕಾಯುವ ಸೈನಿಕರ ಬಗ್ಗೆ ಹಾಗೂ ಅವರ ಸೇವೆಯ ಬಗ್ಗೆ ವಿವರಿಸಿದರು.
ಕಾಲೇಜಿನ ಪ್ರಾಂಶುಪಾಲ ಡಾ. ಪ್ರಶಾಂತ್ ಶೆಟ್ಟಿ ಸ್ವಾಗತಿಸಿದರು. ಕಾರ್ಯಕ್ರಮವನ್ನು ಕಾಲೇಜಿನ ದೈಹಿಕ ನಿರ್ದೇಶಕ ಧರ್ಮೇಂದ್ರ ಕುಮಾರ್ ನಿರೂಪಣೆ ಮಾಡಿದರು. ಕಾಲೇಜಿನ ಉಪನ್ಯಾಸಕ ಬಂಧುಗಳು, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಭಾಗವಹಿಸಿದ್ದರು. ಕಾಲೇಜಿನ ಉಪ ಪ್ರಾಂಶುಪಾಲ ಡಾ. ಸುಜಾತಾ ವಂದನಾರ್ಪಣೆ ಮಾಡಿದರು.