
ವೇಣೂರು: ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢ ಶಾಲಾ ವಿಭಾಗದಲ್ಲಿ ನಡೆದ 79ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಉಪ ಪ್ರಾಂಶುಪಾಲ ವೆಂಕಟೇಶ ಎಸ್. ತುಳುಪುಳೆ ನೆರವೇರಿಸಿದರು.
ನಿರ್ಮಿಸಿದ ನೂತನ ಪ್ರವೇಶ ದ್ವಾರದ ಉದ್ಘಾಟನೆಯನ್ನು ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಭಾಸ್ಕರ ಪೈ, ನೂತನ ದ್ವಜಸ್ತಂಭದ ಲೋಕಾರ್ಪಣೆಯನ್ನು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಉಪಾಧ್ಯಕ್ಷ ರಾಜೇಶ್ ಪೂಜಾರಿ ಮೂಡುಕೋಡಿ ನೇರವೇರಿಸಿದರು.
ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಹಳೆ ವಿದ್ಯಾರ್ಥಿಗಳು, ಶಿಕ್ಷಕ ವೃಂದ, ಪೋಷಕರು, ವಿದ್ಯಾರ್ಥಿಗಳು ಹಾಜರಿದ್ದರು. ಶಿಕ್ಷಕರಾದ ರವೀಂದ್ರ ಕೆ. ಸ್ವಾಗತಿಸಿ, ನೆಲ್ಸನ್ ಕ್ಯಾಸ್ಟಲಿನೊ ಮತ್ತು ಸಂಧ್ಯಾ ಜೈನ್ ಕಾರ್ಯಕ್ರಮ ನಿರೂಪಿಸಿದರು. ಸುಶೀಲ ಜಿ. ವಂದಿಸಿದರು.