
ನಾವೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆ.15ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಧ್ವಜಾರೋಹಣವನ್ನು SDMC ಅಧ್ಯಕ್ಷ ಕೃಷ್ಣಪ್ಪ ಗೌಡ ನೆರವೇರಿಸಿದರು. ಕಾರ್ಯಕ್ರಮದಲ್ಲಿ SDMC ಯ ಉಪಾಧ್ಯಕ್ಷೆ ಶ್ರುತಿ ಜೈನ್ ಹಾಗೂ ಸದಸ್ಯರು, ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷ ಡಾ. ಪ್ರದೀಪ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರಿಯ ಲಕ್ಷ್ಮಣ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಎಲ್ಲಾ ಸದಸ್ಯರು ಪೋಷಕರು, ವಿದ್ಯಾಭಿಮಾನಿಗಳು, ಅಧ್ಯಾಪಕವೃಂದ ಹಾಗೂ ಮಕ್ಕಳು ಭಾಗವಹಿಸಿದರು.

ಶಾಲಾ ಮುಖ್ಯ ಶಿಕ್ಷಕಿ ರೋಹಿಣಿ ಕೆ. ಸ್ವಾಗತಿಸಿದರು. ಶುಭ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಹಳೆ ವಿದ್ಯಾರ್ಥಿ ಸಂಘದಿಂದ ಗಿಡ ನೆಡುವ ಕಾರ್ಯಕ್ರಮ, ಸಭಾ ಕಾರ್ಯಕ್ರಮ ಹಾಗೂ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು. ಸಹ ಶಿಕ್ಷಕಿ ಶೋಭಾ ಧನ್ಯವಾದ ಸಲ್ಲಿಸಿದರು.