
ಬೆಳಾಲು: ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಕಾರ್ಯಕ್ರಮ ನಡೆಯಿತು. ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ ಧ್ವಜಾರೋಹಣ ನೆರವೇರಿಸಿದರು. ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಗೀತಾ, ಸದಸ್ಯರುಗಳು, ಪಂಚಾಯತ್ ಸಿಬ್ಬಂದಿಗಳು, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ಊರಿನ ಗಣ್ಯರು ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಗದೀಶ್ ಸ್ವಾಗತಿಸಿ, ಗ್ರಂಥಪಾಲಕರು ಡೀಕಯ್ಯ ಗೌಡ ಕಾರ್ಯಕ್ರಮ ನಿರೂಪಿಸಿ, ವಿಶೇಷ ಚೇತನರ ಪುನರ್ವಸತಿ ಕಾರ್ಯಕರ್ತ ಈರಣ್ಣ ವಂದನಾರ್ಪಣೆಗೈದರು.