Site icon Suddi Belthangady

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ಸಂಭ್ರಮಾಚರಣೆ

ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಬಹಳ ಸಂಭ್ರಮದಿಂದ ಆಚರಿಸಲಾಯಿತು.

ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮೌಲಾನ ಅಕಿಲ್ ಶಾ ಖತಿಬರು ಜಮಿಯ ಮಸ್ಜಿದ್ ಜಮಲಾಬಾದ್ ಇವರು ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿ ಮಾತನಾಡಿ ” ಸ್ವತಂತ್ರ ಭಾರತದ ಘನತೆಯನ್ನು ಉಳಿಸಿಕೊಂಡು ಹೋಗುವುದು ನಮ್ಮೆಲ್ಲರ ಆಧ್ಯ ಕರ್ತವ್ಯ” ಎಂದರು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಟ್ರಸ್ಟಿನ ಸಂಚಾಲಕರಾದ ಜನಾಬ್ ಸಯ್ಯದ್ ಹಬೀಬ್ ಸಾಹೇಬ್ ವಹಿಸಿಕೊಂಡಿದ್ದರು. ಸಭಾ ಕಾರ್ಯಕ್ರಮದ ವೇದಿಕೆಯಲ್ಲಿ ಶಾಲಾ ಆಡಳಿತ ಟ್ರಸ್ಟಿನ ಕಾರ್ಯದರ್ಶಿ ಸಯ್ಯದ್ ಮಹಮ್ಮದ್ ಅಯ್ಯುಬ್ , ಕೋಶಾಧಿಕಾರಿ ಸಯ್ಯದ್ ಮಹಮ್ಮದ್ ಇರ್ಫಾನ್, ಶಾಲಾ ಮುಖ್ಯೋಪಾಧ್ಯಾಯಿನಿ ಜಾಕಿನ್ ಬಿನ್, ಅರಬಿಕ್ ಶಿಕ್ಷಣ ಗುರುಗಳಾದ ಹಾಫಿಜ್ ವಾಸಿಮ್ , ಆಡಳಿತ ಮಂಡಳಿಯ ಸದಸ್ಯರಾದ ಶೇಕ್ ಅಬ್ದುಲ್ ಗಫೂರ್, ಸ್ಥಳೀಯರಾದ ಮುನಿರಾಜ ಅಜ್ರಿ ಉಪಸ್ಥಿತರಿದ್ದರು.

ಶಾಲಾ ವಿದ್ಯಾರ್ಥಿಗಳು ಶಿಸ್ತುಬದ್ಧ ಪಥ ಸಂಚಲನದ ಮೂಲಕ ರಾಷ್ಟ್ರಧ್ವಜಕ್ಕೆ ಗೌರವಾರ್ಪಣೆಯನ್ನು ಸಲ್ಲಿಸಿದರು.ಶಾಲಾ ಪುಟಾಣಿ ಮಕ್ಕಳಿಂದ ದೇಶಭಕ್ತಿ ಸಾರುವ ಸಾಂಸ್ಕೃತಿಕ ಕಾರ್ಯಕ್ರಮವು ಎಲ್ಲರ ಗಮನ ಸೆಳೆಯಿತು. ಶಾಲಾ ಮಕ್ಕಳಿಂದ ಭಾರತ ಭೂಪಟದ ಸುಂದರ ಚಿತ್ರಣದ ಅಣಕು ಪ್ರದರ್ಶನವು ಶಾಲಾ ಮುಖ್ಯೋಪಾಧ್ಯಾಯರ ವರ್ಣನೆಯೊಂದಿಗೆ ಸುಂದರವಾದ ಕಾರ್ಯಕ್ರಮಕ್ಕೆ ಮೆರುಗನ್ನು ನೀಡಿತ್ತು.

ಪೋಷಕರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. 9ನೇ ತರಗತಿಯ ಮಹಮ್ಮದ್ ಜಾಫರ್ ಕಾರ್ಯಕ್ರಮವನ್ನು ನಿರೂಪಿಸಿ, 10ನೇ ತರಗತಿಯ ಅಶ್ಫಿಯ ಅತಿಥಿಗಳನ್ನು ಸ್ವಾಗತಿಸಿದರು.10ನೇ ತರಗತಿಯ ಮೊಹಮ್ಮದ್ ಹಫೀಜ್ ಧನ್ಯವಾದ ಸಮರ್ಪಿಸಿದರು.
ಕಾರ್ಯಕ್ರಮದ ಬಳಿಕ ಮಕ್ಕಳಿಗೆ ಸಿಹಿ ತಿಂಡಿಯನ್ನು ವಿತರಿಸಲಾಯಿತು.

Exit mobile version