Site icon Suddi Belthangady

ಪಿಲ್ಯ: ಗುಡ್ ಫ್ಯೂಚರ್ ಚೈಲ್ಡ್ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

ಪಿಲ್ಯ: ಗುಡ್ ಫ್ಯೂಚರ್ ಚೈಲ್ಡ್ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಆ. 15ರಂದು ದೇಶಭಕ್ತಿಯ ವಾತಾವರಣದಲ್ಲಿ ಭಾವಪೂರ್ಣವಾಗಿ ನಡೆಯಿತು.
ಕಾರ್ಯಕ್ರಮವು ಶಾಲಾ ಪ್ರಾಂಗಣದಲ್ಲಿ ಪ್ರಾರಂಭಗೊಂಡಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಬೇಬಿ ಪೂಜಾರಿ ಅವರು ತ್ರಿವರ್ಣ ಧ್ವಜಾರೋಹಣ ಮಾಡಿ ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ದೇಶಭಕ್ತಿ ಸಂದೇಶ ನೀಡಿದರು.

ಶಾಲೆಯ ಶಿಕ್ಷಕ–ರಕ್ಷಕ ಸಂಘದ ಅಧ್ಯಕ್ಷ ಶುಕುರ್ ಸಾಹೇಬ್, ಉಪಾಧ್ಯಕ್ಷೆ ಧನಕೀರ್ತಿ ಜೈನ್ ಹಾಗೂ ವಿನಯ, ಕಾರ್ಯದರ್ಶಿ ಹಾಗೂ ಶಾಲೆಯ ಮುಖ್ಯೋಪಾಧ್ಯಾಯ ಪ್ರಭಾಕರ ಶೆಟ್ಟಿ ಮತ್ತು ಸಂಘದ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಪ್ರಾರಂಭದಲ್ಲಿ ವಿದ್ಯಾರ್ಥಿಗಳಾದ ಮಹಾನ್, ಅವನೀಶ್, ಶ್ರುತನ್ ಜೈನ್ ಹಾಗೂ ಅನುಷ್ಕಾ ಪ್ರಾರ್ಥನೆ ಸಲ್ಲಿಸಿದರು. ಶಿಕ್ಷಕಿ ರಕ್ಷಿತ ಸ್ವಾಗತ ಭಾಷಣ ಮಾಡಿದರು. ಮುಖ್ಯೋಪಾಧ್ಯಾಯರು ಸಂವಿಧಾನ ವಾಚನ ನಡೆಸಿ, ವಿದ್ಯಾರ್ಥಿಗಳಲ್ಲಿ ದೇಶಪ್ರೇಮ, ಶಿಸ್ತು ಹಾಗೂ ಸೇವಾಭಾವವನ್ನು ಬೆಳೆಸಿಕೊಳ್ಳುವಂತೆ ಹಾರೈಸಿದರು.

ನಂತರ ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆಗಳು, ಭಾಷಣಗಳು, ನೃತ್ಯ ಮತ್ತು ಚಿತ್ರಕಲೆ ಪ್ರದರ್ಶನಗಳು ನಡೆಯಿತು. ಮಕ್ಕಳ ಉತ್ಸಾಹ, ಪೋಷಕರ ಸಹಭಾಗಿತ್ವ ಹಾಗೂ ಶಿಕ್ಷಕರ ಮಾರ್ಗದರ್ಶನದಿಂದ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು. ಕಾರ್ಯಕ್ರಮದಲ್ಲಿ ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಶಿಕ್ಷಕಿ ಸರ್ವಾಣಿಯವರು ನಿರೂಪಿಸಿದರು.

ಎಲ್ಲ ಶಿಕ್ಷಕ–ಶಿಕ್ಷಕೇತರ ಸಿಬ್ಬಂದಿ, ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳು ಹಾಗೂ ಪೋಷಕರು ಸಕ್ರಿಯವಾಗಿ ಪಾಲ್ಗೊಂಡು ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣಗೊಳಿಸಿದರು.

Exit mobile version