
ಬೆಳ್ತಂಗಡಿ: ತಾಲೂಕಿನ ವಕೀಲ, ಭಾರತೀಯ ಮಜ್ದೂರು ಸಂಘದ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಅಧ್ಯಕ್ಷ ಅನಿಲ್ ಕುಮಾರ್ ಯು. ಅವರು, ಇತ್ತೀಚೆಗೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೋನಳ್ಳಿಯ ಶ್ರೀ ವನದುರ್ಗಾ ದೇವಾಲಯದ ಸಮೀಪದ ಪವಿತ್ರ ಮಠದಲ್ಲಿ ಚಾತುರ್ಮಾಸ್ಯ ವೃತಾಚರಣೆ ಮಾಡುತ್ತಿರುವ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಮಹಾಮಂಡಲೇಶ್ವರ ಶ್ರೀ 1008 ಸದ್ಗುರು ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಸ್ವಾಮೀಜಿಯವರಿಂದ ಆಶೀರ್ವಾದ ಪಡೆದಿರುವುದು ಅವರಿಗೂ ಅವರ ಕುಟುಂಬಕ್ಕೂ ಅಪೂರ್ವ ಸೌಭಾಗ್ಯವಾಗಿದೆ ಎಂದು ಅವರು ತಮ್ಮ ಸಂತಸ ಹಂಚಿಕೊಂಡರು.